ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಶಿವಮೊಗ್ಗ ನಗರ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಉದಯಪುರದಲ್ಲಿ ನಡೆದ ಘಟನೆಯ ಬಗ್ಗೆ ಆರೋಪಿಗಳೇ ತಪ್ಪೊಪ್ಪಿಕೊಂಡ ಮೇಲೆ ಗುಂಡಿಟ್ಟು ಕೊಲ್ಲುವುದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದರು.
ರಾಷ್ಟ್ರಭಕ್ತ ಹಿಂದೂಗಳನ್ನು ಹೇಡಿಗಳ ರೂಪದಲ್ಲಿ ಕೊಲೆ ಮಾಡಲಾಗುತ್ತಿದೆ. ಕೊಲೆಗಡುಕ ಮುಸಲ್ಮಾನರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿ ಮಾಡಬೇಕು. ಸಂವಿಧಾನಬದ್ಧವಾಗಿ ಗಲ್ಲುಶಿಕ್ಷೆ ಅಥವಾ ಗುಂಡಿಟ್ಟು ಕೊಲ್ಲುವ ಶಿಕ್ಷೆ ನೀಡಬೇಕು. ಕೊಲೆ ಮಾಡಿದ್ದನ್ನು ಅವರೇ ವಿಡಿಯೊ ಮೂಲಕ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಮುಖಂಡ ಹಾಗೂ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಹಿಂದೂಗಳು ಕಾನೂನು, ಸಂವಿಧಾನಕ್ಕೆ ಗೌರವ ಕೊಟ್ಟು, ಕೈ ಕಟ್ಟಿ ಕುಳಿತಿದ್ದೇವೆ. ಹಗ್ಗ ಬಿಚ್ಚಿದರೇ ಏನಾಗುತ್ತದೆ ಎಂದು ಮುಸಲ್ಮಾನ ಸಮಾಜ ಯೋಚನೆ ಮಾಡಬೇಕು. ಸಹನೆ ಹಿಂದೂಗಳ ಬಲ. ನಮ್ಮ ದೌರ್ಬಲ್ಯ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೂಡಾ ಅಧ್ಯಕ್ಷ ನಾಗರಾಜ್, ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಮಾಜಿ ಶಾಸಕ ಆರ್.ಕೆ. ಸಿದ್ಧರಾಮಣ್ಣ, ವಿಶ್ವಾಸ್, ಅನಿತಾ ರವಿಶಂಕರ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಮೋಹನ್ ರೆಡ್ಡಿ, ರಾಮು ಮೊದಲಾದವರಿದ್ದರು.
previous post