Malenadu Mitra
ರಾಜ್ಯ ಶಿವಮೊಗ್ಗ

ಮುರುಘಾ ಶರಣರ ಬಂಧನ, ಆರೋಪ ಬಂದ ಆರು ದಿನಗಳ ಬಳಿಕ ಶ್ರೀಗಳ ಸೆರೆ, ಅಜ್ಞಾತ ಸ್ಥಳದಲ್ಲಿ ವಿಚಾರಣೆ, ವೈದ್ಯಕೀಯ ಪರೀಕ್ಷೆ ಸಾಧ್ಯತೆ

ಚಿತ್ರದುರ್ಗದ ಮುರುಘಾಮಠದ : ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸರು ಬಂಧಿಸಿದ್ದಾರೆ.

‘ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದೇವೆ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಭಾರಿ ಸಂಖ್ಯೆಯಲ್ಲಿ ಮುರುಘಾ ಮಠಕ್ಕೆ ಬಂದಿದ್ದ ಪೊಲೀಸ್‌ ತನಿಖಾ ತಂಡ, ಮುರುಘಾ ಶರಣರನ್ನು ವಶಕ್ಕೆ ಪಡೆದು ಬಿಗಿ ಭದ್ರತೆಯಲ್ಲಿ ತಮ್ಮೊಂದಿಗೆ ಕರೆದುಕೊಂಡು ಹೋದರು. ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ತನಿಖಾಧಿಕಾರಿ ಡಿವೈಎಸ್‌ಪಿ ಅನಿಲ್‌ಕುಮಾರ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಇದಕ್ಕೂ ಮೊದಲು ಗುರುವಾರ ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್‌ ವಾರ್ಡನ್‌ ಅವರನ್ನು ತನಿಖಾ ತಂಡ ವಶಕ್ಕೆ ಪಡೆದಿತ್ತು.

ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು. ಆಗಸ್ಟ್‌ 26ರಂದು ಮೈಸೂರಿನ ಮಕ್ಕಳ ಕಲ್ಯಾಣ ಸಮಿತಿ ಎದುರು ಮಕ್ಕಳ ಹಾಜರು ಪಡಿಸಿದ ಬಳಿಕ ಅಂದು ರಾತ್ರಿ ನಜರಬಾದ್‌ ಪೊಲೀಸ್‌ ಠಾಣೆಯಲ್ಲಿ ಮುರುಘಾ ಶರಣರು ಸೇರಿ ಐವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಮೈಸೂರಿನಿಂದ ಪ್ರಕರಣವನ್ನು ಆ.27ರಂದು ಚಿತ್ರದುರ್ಗದ ಗ್ರಾಮೀಣ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿತ್ತು. ಪ್ರಕರಣ ದಾಖಲಾಗಿ ಕೆಲ ದಿನಗಳಾದರೂ ಮುರುಘಾ ಶರಣರನ್ನು ಬಂಧಿಸದೇ ಇರುವುದನ್ನು ಖಂಡಿಸಿ ಪ್ರತಿಭಟನೆಗಳು ನಡೆದಿದ್ದವು.

Ad Widget

Related posts

ಸುಖ ಭೋಗದ ಬೆನ್ನು ಹತ್ತಿದರೆ ಅನಾರೋಗ್ಯ ಖಂಡಿತ, ಯೋಗ ದಿನಾಚರಣೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಎಚ್ಚರಿಕೆ

Malenadu Mirror Desk

ಹಿಂದುಳಿದ ವರ್ಗಗಳು ಒಟ್ಟಾದಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ

Malenadu Mirror Desk

ಜೀವಪರ ಸರ್ಜಿ ಬಿಜೆಪಿ ತೆಕ್ಕೆಗೆ, ಕಮಲ ಹಿಡಿದ ಕೆ.ಜಿ.ಶಿವಪ್ಪ ಪುತ್ರ ಪ್ರಶಾಂತ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.