Malenadu Mitra
ರಾಜ್ಯ ಶಿವಮೊಗ್ಗ

ಐಸಿಸ್ ನಂಟು : ಶಿವಮೊಗ್ಗದಲ್ಲಿ ಇಬ್ಬರ ಬಂಧನ, ಮತ್ತೊಬ್ಬನಿಗೆ ಶೋಧ

ಶಿವಮೊಗ್ಗದಲ್ಲಿ ನಿಷೇಧಿತ ಭಯೋತ್ಪದಕ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಮೇರೆಗೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ರಾಷ್ಟ್ರಧ್ವಜವನ್ನು ಸುಟ್ಟು ಹಾಕಿರವ ಮತ್ತು ಸ್ಪೋಟಕಗಳನ್ನು ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಮಂಗಳೂರಿನ ಮಾಜ್ ಮುನೀರ್ ಅಹಮದ್ (೨೨) ಮತ್ತು ಶಿವಮೊಗ್ಗ ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ (೨೧) ಬಂಧಿತರು. ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಶಾರೀಕ್ ಎಂಬಾತನ ಬಂಧನವಾಗಬೇಕಿದೆ.

ಐಸಿಸ್ ನಂಟು

ಮೂವರು ಶಂಕಿತರು ಇಸ್ಲಾಮಿಕ್ ಸ್ಟೇಟ್ (ಐಎಸ್‌ಐಎಸ್) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಭಯೋತ್ಪಾದಕ ಕೃತ್ಯಗಳನ್ನು ಮುಂದುವರಿಸುವ ಸಲುವಾಗಿ ಒಳಸಂಚು ರೂಪಿಸಿದ್ದರು ಎಂದು ಆಪಾದಿಸಲಾಗಿದೆ.
ಸ್ಫೋಟಕಗಳು, ರಾಷ್ಟ್ರ ಧ್ವಜ

ಶಂಕಿತರು ಸಾರ್ವಜನಿಕ ಆಸ್ತಿ ಮತ್ತು ಪ್ರಾಣಕ್ಕೆ ಅಪಾಯವಾಗುವ ಸ್ಪೋಟಕಗಳನ್ನು ಇಟ್ಟುಕೊಂಡಿರುವ ಶಂಕೆ ಇದೆ. ಭಾರತದ ರಾಷ್ಟ್ರಧ್ವಜವನ್ನು ಸುಟ್ಟಿರುವುದಾಗಿ ತಿಳಿದು ಬಂದಿದೆ ಎಂದು ಎಫ್‌ಐಆರ್’ನಲ್ಲಿ ತಿಳಿಸಲಾಗಿದೆ.

ಯುಎಪಿಎ ಅಡಿ ಪ್ರಕರಣ

ಬಂಧಿತರ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಿರ್ಬಂಧ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇಬ್ಬರು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೆ.೨೯ರವರೆಗೆ ಶಂಕಿತರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Ad Widget

Related posts

ಸಿಗಂದೂರು ಮುಜರಾಯಿಗೆ ಸೇರಿಸುವ ಪ್ರಯತ್ನದ ವಿರುದ್ಧ ದೊಡ್ಡ ಹೋರಾಟ, ಗಂಗಾವತಿ ಈಡಿಗರ ಚಿಂತನ-ಮಂಥನ ಸಭೆಯಲ್ಲಿ ಗುತ್ತೇದಾರ್ ಎಚ್ಚರಿಕೆ

Malenadu Mirror Desk

ಶಿವಮೊಗ್ಗದಲ್ಲಿ ಭೂಕಂಪನ :ಬೆಚ್ಚಿಬಿದ್ದ ಜನ

Malenadu Mirror Desk

ಸಮಗ್ರ ಅಭಿವೃದ್ಧಿಗೆ ನನ್ನ ಜತೆಗೆ ಅಧಿಕಾರಿಗಳು ಕೈಜೋಡಿಸಬೇಕು: ಮಧು ಬಂಗಾರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.