ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋರ್ಟ್ ಸೂಚನೆಯಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮೆಗ್ಗಾನ್ ವೈದ್ಯರ ತಂಡ ಅಗತ್ಯ ಪರೀಕ್ಷೆಗಳ ಜೊತೆ ಶ್ರೀಗಳ ದೈಹಿಕ ಕ್ಷಮತೆ ಗಮನಿಸಿತ್ತು ಎಂದರು.
ಗುರುವಾರ ಬೆಳಿಗ್ಗೆ ೧೦.೪೫ ರಿಂದ ಆಂಜಿಯೋಗ್ರಾಂ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ. ಹೃದಯ ತಜ್ಞರಾದ ಡಾ. ಮಹೇಶ್ ಮೂರ್ತಿ, ಡಾ. ಪರಮೇಶ್ವರ್ ಶ್ರೀಗಳ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆ. ೨೪ ಗಂಟೆಗಳ ಕಾಲ ತೀವ್ರ ನಿಗಾದಲ್ಲಿ ಇಟ್ಟಿದ್ದೇವೆ. ಚಿಕಿತ್ಸೆ ಬಳಿಕ ಶ್ರೀಗಳ ಬಿಪಿ, ಸ್ಯಾಚುರೇಶನ್ ಎಲ್ಲವೂ ನಾರ್ಮಲ್ ಅಗಿದೆ ಎಂದು ಮಾಹಿತಿ ನೀಡಿದರು.
ಆಂಜಿಯೋಗ್ರಾಂ ಮಾಡುವ ಮುನ್ನ ಜೈಲಧಿಕಾರಿ ಅನುಮತಿ ತೆಗೆದುಕೊಳ್ಳಲಾಗಿತ್ತು. ಯಶಸ್ವಿಯಾದ ಬಳಿಕವೂ ಅವರಿಗೆ ಮಾಹಿತಿ ನೀಡಲಾಗಿದೆ. ಶ್ರೀಗಳ ಆರೋಗ್ಯ ಸ್ಥಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ಮಾಹಿತಿ ನೀಡಿದರು. ಮುರುಘಾ ಶರಣರ ಆರೋಗ್ಯ ಸಹಜವಾಗಿದ್ದು, ಯಾವುದೇ ತೊಂದರೆಯಿಲ್ಲ ಎಂದು ಡಾ.ವಿರೂಪಾಕ್ಷಪ್ಪ ತಿಳಿಸಿದ್ದಾರೆ.
previous post