Malenadu Mitra
ರಾಜ್ಯ ಶಿವಮೊಗ್ಗ

ಆಪರೇಷನ್ ಕಮಲ ನಿಲ್ಲಿಸಲು ಸುಪ್ರೀಂ  ಕೋರ್ಟ್ ಮಧ್ಯಪ್ರವೇಶ ಮಾಡಲಿ

ದೇಶದೆಲ್ಲೆಡೆ ಆಪರೇಷನ್ ಕಮಲ ನಡೆಸಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇದರಿಂದ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಿ ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.
 ಶಿವಮೊಗ್ಗ ನಗರದಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊನ್ನೆ ತೆಲಂಗಾಣ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಿ ಕೆಲವರು ಸಿಕ್ಕಿಬಿದ್ದಿದ್ದಾರೆ. ಇದೇ ರೀತಿ ದೇಶಾದ್ಯಂತ ಬಿಜೆಪಿಯವರು ಆಪರೇಷನ್ ಕಮಲ ನಡೆಸಿಕೊಂಡು ಬರುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ನೀತಿಯಾಗಿದೆ. ರಾಜ್ಯದಲ್ಲಿಯೂ ಆಪರೇಷನ್ ಕಮಲದ ಮೂಲಕವೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದರು.
ಅದ್ದೂರಿ ಸ್ವಾಗತ:
ನ.೬ರಂದು ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದು, ಕೆಪಿಸಿಸಿ ವತಿಯಿಂದ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
೫೦ ವರ್ಷಗಳ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ಇಡೀ ರಾಜ್ಯಕ್ಕೆ ಸಂತೋಷ ತಂದಿದೆ. ಈ ಬಗ್ಗೆ ಭಾನುವಾರ ಪೂರ್ವಭಾವಿ ಸಭೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಖರ್ಗೆಯವರ ಅಧ್ಯಕ್ಷತೆ ರಾಜ್ಯಕ್ಕೆ ದೊಡ್ಡ ಶಕ್ತಿ ತಂದಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಎಲ್ಲಾ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳು, ಜಿಪಂ ಹಾಗೂ ಗ್ರಾಪಂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಅವರಿಗೆ ಶುಭ ಕೋರುವ ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಖರ್ಗೆಯವರ ನಿಷ್ಠೆ, ಪ್ರಾಮಾಣಿಕತೆ ಗುರುತಿಸಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದ್ದು, ಇದು ಕಾಂಗ್ರೆಸ್ ಪ್ರಜಾಪ್ರಭುತ್ವಕ್ಕೆ ಮಾದರಿಯಾಗಿದೆ. ಕಾಂಗ್ರೆಸ್‌ನಲ್ಲಿ ಮಾತ್ರ ಇದು ಸಾಧ್ಯ ಎಂದರು.
ರಾಜ್ಯದ ಸಚಿವ ಎಂಟಿಬಿ ನಾಗರಾಜ್ ಪಿಎಸ್‌ಐ ವರ್ಗಾವಣೆಗೆ ೮೦ಲಕ್ಷ ರೂ. ಲಂಚದ ವಿಚಾರದ ಆಡಿಯೊ ಒಂದು ವೈರಲ್ ಆಗಿದ್ದು, ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆಪರೇಷನ್ ಲೋಟಸ್‌ನಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಸುಮೋಟೊ ಪ್ರಕರಣದಿಂದ ಇದರ ಸತ್ಯಾಸತ್ಯತೆ ಬಯಲಿಗೆ ಬರಲಿ ಎಂದರು.
ಶಿವಮೊಗ್ಗ ನಗರದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಂದಲೇ ಗಲಾಟೆ ನಡೆಯುತ್ತಿದೆ. ಇದರಿಂದ ಇಲ್ಲಿ ಯಾರು ಹೂಡಿಕೆ ಮಾಡಲು ಮುಂದೆ ಬರುತ್ತಿಲ್ಲ. ಈಶ್ವರಪ್ಪ ಅವರಿಗೆ ತಾಕತ್ ಇದ್ರೆ ಹೂಡಿಕೆದಾರರನ್ನು ಜಿಲ್ಲೆಗೆ  ಕರೆದುಕೊಂಡು ಬರಲಿ ಎಂದು ಡಿಕೆಶಿ ಸವಾಲೆಸೆದರು.  ಜಿಲ್ಲಾ ಕಾಂಗ್ರೆಸ್ ಅಧ್ಯಕ್ ಹೆಚ್.ಎಸ್. ಸುಂದರೇಶ್, ಆರ್.ಎಂ. ಮಂಜುನಾಥ ಗೌಡ, ಎನ್. ರಮೇಶ್ ಮೊದಲಾದವರಿದ್ದರು.

Ad Widget

Related posts

ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಕಟ್ಟು ಬೀಳಬಾರದು, ಮಲೆನಾಡು ಮಿತ್ರ’ಪತ್ರಿಕೆ ಮರು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಸವಕೇಂದ್ರ ಆಶಯ

Malenadu Mirror Desk

ಶಿವಮೊಗ್ಗದಲ್ಲಿ ಶ್ರೀರಾಮಾಯಣ ಕಥಾಮೃತ

Malenadu Mirror Desk

ಬಿಜೆಪಿಯಲ್ಲಿ ಈಶ್ವರಪ್ಪ ಮೂಲೆ ಗುಂಪು, ಬಾಯಿಗೆ ಬಂದಂಗೆ ಮಾತನಾಡುವುದೇ ಅವರ ಅರ್ಹತೆ: ಆಯನೂರು ಮಂಜುನಾಥ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.