Malenadu Mitra
ರಾಜ್ಯ ಶಿವಮೊಗ್ಗ

ಬಿಜೆಪಿ ಹಿಂದುತ್ವದ ಆಧಾರದಲ್ಲಿಯೇ ಚುನಾವಣೆ ನಡೆಸಲಿದೆ,
ಕಾಂಗ್ರೆಸ್‌ಗೆ ಮುಸ್ಲಿಂ ಮತಗಳು ಕೈ ತಪ್ಪುವ ಭಯವಿದೆ: ಈಶ್ವರಪ್ಪ

ಶಿವಮೊಗ್ಗ: ಹಿಂದುತ್ವದ ಆಧಾರದ ಮೇಲೆಯೇ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಮತ ಯಾಚಿಸಿ ರಾಜ್ಯದಲ್ಲಿ ಚುನಾವಣೆ ನಡೆಸಿ ೧೫೦ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ ಎಂದು ಮಾಜಿ ಸಚಿವ ಕೆ,ಎಸ್ ಈಶ್ವರಪ್ಪ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂರ ವೋಟಿನ ಬಗ್ಗೆ ಈಗ ಕಾಂಗ್ರೆಸ್‌ಗೆ ಭಯ ಶುರುವಾಗಿದೆ. ಒಂದು ಕಡೆ ಹೆಚ್.ಡಿ.ಕುಮಾರಸ್ವಾಮಿ ಪಂಚರತ್ನ ಯಾಥ್ರೆಯ ಮೂಲಕ ಹೊರಟಿದ್ದು, ಅವರ ಕಾರ್ಯಕ್ರಮದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಭಾಗವಹಿಸುತಿದ್ದಾರೆ. ಇನ್ನೊಂದೆಡೆ ಆಮ್‌ಆದ್ಮಿ ಪಾರ್ಟಿ ಕೂಡ ಮುಸ್ಲಿಂ ಬೆಂಬಲ ತನಗೆ ಎಂದು ಹೇಳುತ್ತಿದೆ. ಇದರಿಂದ ಕಾಂಗ್ರೆಸ್‌ಗೆ ಮುಸ್ಲಿಂರ ಮತಬುಟ್ಟಿಗೆ ಬೇರೆ ಪಕ್ಷಗಳು ಕೈ ಹಾಕಿದ್ದಾರೆ ಎಂಬ ಭಯ ಅವರನ್ನು ಕಾಡುತ್ತಿದೆ. ಬಿಜೆಪಿಗೆ ಆ ಭಯವಿಲ್ಲ. ಹಿಂದುತ್ವದ ಮೇಲೆಯೇ ಬಿಜೆಪಿ ಹೋರಾಟ ಮಾಡಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಅಧಿಕಾರಕ್ಕೆ ಬರುತ್ತದೆ ಎಂದರು.

ಕಾಂಗ್ರೆಸ್ ಬಿನ್ನಾಭಿಪ್ರಾಯ ಕುರಿತು ಪ್ರತಿಕ್ರಿಯಿಸಿದ ಅವರು, ಬಿನ್ನಾಭಿಪ್ರಾಯಗಳು ರಾಜಕಾರಣದಲ್ಲಿ ಸ್ವಾಭಾವಿಕ. ಯಾವ ಪಕ್ಷಗಳು ಅದಕ್ಕೆ ಹೊರತಾಗಿಲ್ಲ. ೨ ಬಸ್ಸಿನಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಮತ್ತೆ ಡಿ.ಕೆ.ಶಿವಕುಮಾರ್ ಬೇರೆ ಬೇರೆಯಾಗಿ ಪ್ರಚಾರಕ್ಕೆ ತೀರ್ಮಾನಿಸಿದ್ದರು. ಆದರೆ ಈಗ ಹೈಕಮಾಂಡ್ ಸೂಚನೆಯಂತೆ ಒಟ್ಟಾಗಿ ಪ್ರಚಾರ ಕಾರ್ಯ ಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ. ಆದರೆ ಅದು ಅವರ ಪಕ್ಷಕ್ಕೆ ಬಿಟ್ಟ ವಿಷಯ ಎಂದರು.

ಸಚಿವ ಸಂಪುಟ ಸೇರ್ಪಡೆ ಬಗ್ಗೆ ಕೇಂದ್ರದ ನಾಯಕರು ತೀರ್ಮಾನಿಸುತ್ತಾರೆ. ಅವರು ಮಂತ್ರಿಯಾಗು ಎಂದರೆ ಆಗುತ್ತೇನೆ. ಇಲ್ಲದಿದ್ದರೆ ಸಾಮಾನ್ಯ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದರು. ಸಿ.ಎಂ.ದೆಹಲಿ ಭೇಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ ಗಡಿವಿವಾದ ತಾರಕಕ್ಕೇರಿದೆ. ಅಲ್ಲಿನ ನಾಯಕರು ರಾಜಕೀಯ ತೆವಲಿಗಾಗಿ ಜನಸಾಮಾನ್ಯರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಿ.ಎಂ.ಬೊಮ್ಮಾಯಿ ಕೇಂದ್ರ ಗೃಹಸಚಿವರನ್ನು ಭೇಟಿಯಾಗಿ ಪರಿಸ್ಥಿತಿ ವಿವರಿಸಿದ್ದು, ಎರಡೂ ಸರ್ಕಾರಗಳ ಪ್ರತಿನಿಧಿಗಳು ಭಾಗವಹಿಸಿ ಪರಿಹಾರ ಕಂಡುಕೊಳ್ಳುತ್ತಾರೆ. ಮಹಾರಾಷ್ಟ್ರದ ಜನ ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದವರು ಕೂಡ ಅಲ್ಲಿ ಇದ್ದಾರೆ ಅಣ್ಣ ತಮ್ಮಂದಿರಂತೆ ಒಟ್ಟಾಗಿ ಬಾಳುವೆ ನಡೆಸುತ್ತಿದ್ದಾರೆ ಇದನ್ನು ಅರಿತು ಯಾವುದೇ ರಾಜಕೀಯ ಮಾಡದೆ ಸಮಸ್ಯೆ ಬಗೆಹರಿಸಲು ಉಭಯ ಸರ್ಕಾರ ಕೂಡ ಪ್ರಯತ್ನ ನಡೆಸುತ್ತದೆ ಎಂದರು.

Ad Widget

Related posts

ಮಾನವೀಯತೆ ಕಟ್ಟಿಕೊಡುವ ಶಿಕ್ಷಣದ ಅಗತ್ಯವಿದೆ ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಖ್ಯಾತನಂದ ಸ್ವಾಮೀಜಿ ಅಭಿಮತ

Malenadu Mirror Desk

ಸಮಗ್ರ ಅಭಿವೃದ್ಧಿಗೆ ನನ್ನ ಜತೆಗೆ ಅಧಿಕಾರಿಗಳು ಕೈಜೋಡಿಸಬೇಕು: ಮಧು ಬಂಗಾರಪ್ಪ

Malenadu Mirror Desk

ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಮುಖಭಂಗ, ಏಳರಲ್ಲಿ ಕಾಂಗ್ರೆಸ್, ಎರಡು ಜೆಡಿಎಸ್ ಹಾಗೂ ಒಂದರಲ್ಲಿ ಬಿಜೆಪಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.