ಶಿವಮೊಗ್ಗ ನಗರದ ಗ್ರಾಮಾಂತರ ಪೊಲಿಸರು ರೌಡಿಶೀಟರ್ ಪ್ರವೀಣ್ ಆಲಿಯಾಸ್ ಮೋಟು ಪ್ರವೀಣ್‌ಗೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಇತ್ತೀಚೆಗೆ ನಗರದಲಿ ಕಾರಿಗೆ ಬೆಂಕಿಹಚ್ಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿಗಳಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ಸಂದರ್ಭ ರೌಡಿಶೀಟರ್ ಪ್ರವೀಣ್ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಶಿವರಾಜ್ ಎಂಬ ಸಿಬ್ಬಂದಿಗೆ ಗಾಯಗೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಇನ್ಸ್‌ಪೆಕ್ಟರ್ ರಮೇಶ್ ಅವರ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಪ್ರವೀಣ್ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಇಬ್ಬರೂ ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ಆರೋಪಿ ಮೇಲೆ ದೊಡ್ಡ ಪೇಟೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಸೇರಿದಂತೆ ಒಟ್ಟು ಹದಿನೈದು ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.