Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 14,41,833 ಅರ್ಹ ಮತದಾರರು

ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.
ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ಪುರುಷ ಹಾಗೂ 10419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳು ಇವೆ ಎಂದರು.


ವಿಧಾನಸಭಾ ಕ್ಷೇತ್ರವಾರು ವಿವರ:

ಮತದಾರರ ಅಂತಿಮ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರದಲ್ಲಿ 103534 ಪುರುಷ, 104525 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 208062 ಮತದಾರರು ಇದ್ದಾರೆ. ಭದ್ರಾವತಿ ಕ್ಷೇತ್ರದಲ್ಲಿ 101058 ಪುರುಷ, 106546 ಮಹಿಳಾ, ಐವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 207609 ಮತದಾರರು ಇದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ 123770 ಪುರುಷ, 129204 ಮಹಿಳಾ, 15 ತೃತೀಯ ಲಿಂಗಿ ಸೇರಿದಂತೆ 252989 ಮತದಾರರು ಇದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 91376 ಪುರುಷ, 93475 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ 184854 ಮತದಾರರು ಇದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ 98281 ಪುರುಷ, 97086 ಮಹಿಳಾ, ನಾಲ್ವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 195371 ಮತದಾರರು ಇದ್ದಾರೆ. ಸೊರಬ ಕ್ಷೇತ್ರದಲ್ಲಿ 97070 ಪುರುಷ, 95148 ಮಹಿಳಾ, ಇಬ್ಬರು ತೃತೀಯ ಲಿಂಗಿ ಸೇರಿದಂತೆ ಒಟ್ಟು 192220 ಮತದಾರರು ಇದ್ದಾರೆ. ಸಾಗರ ಕ್ಷೇತ್ರದಲ್ಲಿ 99401 ಪುರುಷ, 101326 ಮಹಿಳಾ, ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 200728 ಮತದಾರರು ಇದ್ದಾರೆ. ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಎಂದರು.

ಕಳೆದ ನವೆಂಬರ್ 9ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 14,34,138 ಮತದಾರರ ಹೆಸರು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ 40767 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದ್ದು, 33072 ಮತದಾರರ ಹೆಸರು ಕೈ ಬಿಡಲಾಗಿದೆ. 11651 ತಿದ್ದುಪಡಿ ಮಾಡಲಾಗಿದೆ. ತೆಗೆದು ಹಾಕಿರುವುದಕ್ಕೆ 11873 ಮರಣ, 17064 ಸ್ಥಳಾಂತರ, 1058 ಪುನರಾವರ್ತನೆ ಮತ್ತು 3077 ವಲಸೆ ಕಾರಣವಾಗಿದೆ. ಕರಡು ಪಟ್ಟಿಯಲ್ಲಿ ಲಿಂಗಾನುಪಾತ 1 ಸಾವಿರ ಪುರುಷ ಮತದಾರರಿಗೆ 1014 ಮಹಿಳಾ ಮತದಾರರು ಇದ್ದರು ಎಂದು ಅವರು ಮಾಹಿತಿ ನೀಡಿದರು.

ಸೇರ್ಪಡೆಗೆ ಅವಕಾಶ:

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಮಾತನಾಡಿ,2023ರ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂಬAಧದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಗೆ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದವರೆಗೂ ಹೆಸರು ಸೇರಿಸಲು ಅವಕಾಶವಿರುತ್ತದೆ. ನಮೂನೆ -6 ಸೇರ್ಪಡೆ, ನಮೂನೆ-6ಎ ಅನಿವಾಸಿ ಭಾರತೀಯರು ಹೆಸರು ನೊಂದಾಯಿಸಿಕೊಳ್ಳಲು, 6-ಬಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು, ನಮೂನೆ-7 ತೆಗೆದು ಹಾಕಲು, ನಮೂನೆ-8ರಲ್ಲಿ ತಿದ್ದುಪಡಿ, ವರ್ಗಾವಣೆ, ಬದಲಿ ಎಪಿಕ್‌ಗೆ ಮನವಿ ಮತ್ತು ಅಂಗವೈಕಲ್ಯ ಹೊಂದಿರುವ ಮತದಾರರು ವಿವರ ದಾಖಲಿಸಲು ಅವಕಾಶವಿದೆ ಎಂದು ತಿಳಿಸಿದರು.
.

Ad Widget

Related posts

ನ್ಯಾಷನಲ್ ಹೈಸ್ಕೂಲ್ ಆಧುನಿಕರಣ

Malenadu Mirror Desk

ಮೂಲ ಸೌಕರ್ಯಗಳ ಅಸಮರ್ಪಕ ನಿರ್ವಹಣೆ: ಮನವಿ

Malenadu Mirror Desk

ಸಿಗಂದೂರು ದೇವಿ ಶಾಪದಿಂದ ಯಡಿಯೂರಪ್ಪ ಕುರ್ಚಿಗೆ ಕಂಟಕ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.