ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅನುಮೋದನೆ ಮೇರೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪನವರು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರನ್ನಾಗಿ ಜಿ.ಡಿ ಮಂಜುನಾಥ್ ಅವರನ್ನು ನೇಮಕ ಮಾಡಿದ್ದಾರೆ.
ಜೆಡಿಎಸ್‌ನಲ್ಲಿದ್ದ ಮಂಜುನಾಥ್ ಅವರು ಮಧುಬಂಗಾರಪ್ಪ ಅವರೊಂದಿಗೆ ಕಾಂಗ್ರೆಸ್ ಸೇರಿದ್ದು, ಶಿವಮೊಗ್ಗ ಜಿಲ್ಲಾ ಮುಖಂಡರಾಗಿ ಕೆಲಸ ಮಾಡಿದ್ದಾರೆ. ಉತ್ತಮ ಸಂಘಟಕರಾದ ಮಂಜುನಾಥ್ ಅವರ ಸೇವೆಯನ್ನು ಪರಿಗಣಿಸಿ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರನ್ನಾಗಿ ಮಾಡಲಾಗಿದೆ. ಅದೇ ರೀತಿ ಕಾಶಿ ವಿಶ್ವನಾಥ್ ಮತ್ತು ರಘು ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ನೇಮಕಕ್ಕೆ ಸಹಕರಿಸಿದ ರಾಜ್ಯ ಹಾಗೂ ಜಿಲ್ಲೆಯ ಎಲ್ಲ ಮುಖಂಡರಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾದ ಜಿ.ಡಿ ಮಂಜುನಾಥ್ ಧನ್ಯವಾದಗಳು ಸಲ್ಲಿಸಿದ್ದಾರೆ.