ಜಾತ್ಯತೀತ ಜನತಾದಳದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ವಕೀಲ ಕೆ.ಎಲ್.ಉಮೇಶ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾದ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಈ ನೇಮಕ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ.
ಉಮೇಶ್ ಅವರು ಮೂಲತಃ ತೀರ್ಥಹಳ್ಳಿ ತಾಲೂಕಿನವರು. ಜೆಡಿಎಸ್ ಜಿಲ್ಲಾ ಘಟಕದಲ್ಲಿ ವಿವಿಧ ಹುದ್ದೆಗಳಲ್ಲಿಸೇವೆ ಸಲ್ಲಿಸಿರುವ ಅವರು, ಪಕ್ಷಕ್ಕೆ ನಡೆದ ಆಂತರಿಕ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿಯೂ ಕೆಲಸ ನಿರ್ವಹಿಸಿದ್ದಾರೆ. ಜನಪರ ಹಾಗೂ ರೈತ ಪರ ಚಿಂತನೆಯುಳ್ಳ ಉಮೇಶ್ ಅವರನ್ನು ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ಮಾಡಿರುವುದು ಸಂತೋಷ ತಂದಿದೆ ಎಂದು ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ತಿಳಿಸಿದ್ದಾರೆ. ಉಮೇಶ್ ಅವರಿಗೆ ಶ್ರೀಕಾಂತ್ ಅಭಿನಂದನೆ ಸಲ್ಲಿಸಿದ್ದಾರೆ.