Malenadu Mitra
ರಾಜ್ಯ ಶಿವಮೊಗ್ಗ

ಸೊರಬದಲ್ಲಿ ಮಧು ಪರವಾಗಿ ಮತ ಜೋಳಿಗೆ ಹಿಡಿಯುವ ಜೋಗಿ, ಮಧು ಬಂಗಾರಪ್ಪ ಪರ ಮತಯಾಚನೆ ಮಾಡಲಿರುವ ಹ್ಯಾಟ್ರಿಕ್ ಹೀರೊ

ಶಿವಮೊಗ್ಗಏ.: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಸೊರಬ ಕ್ಷೇತ್ರದ ಅಭ್ಯರ್ಥಿ ಮಧುಬಂಗಾರಪ್ಪರ ಪರವಾಗಿ ಆನವಟಿಯಲ್ಲಿಯಲ್ಲಿ ಮಧ್ಯಾಹ್ನ ೧೨ ಗಂಟೆಗೆ ರೋಡ್ ಶೋ ನಡೆಲಿದ್ದಾರೆ. ಈ ರ್‍ಯಾಲಿಯಲ್ಲಿ ಶುಕ್ರವಾರ ತಾನೇ ಕಾಂಗ್ರೆಸ್ ಸೇರಿರುವ ಗೀತಾ ಶಿವರಾಜ್ ಕುಮಾರ್ ಕೂಡಾ ಭಾಗಿಯಾಗಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಆನವಟ್ಟಿಯಲ್ಲಿ ನಡೆಯುವ ಬಹಿರಂಗ ಸಭಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುವರು.
ಜಿಲ್ಲಾ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್. ರಮೇಶ್ ಶನಿವಾರ ಪತ್ರಿಕಾಗೋಷ್ಠಿಯಲಿ ಈ ವಿಷಯ ತಿಳಿಸಿದರು. ಅಭ್ಯರ್ಥಿ ಮಧು ಬಂಗಾರಪ್ಪ ಅವರೂ ಸೇರಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ತಮ್ಮ ಪತಿ ಶಿವರಾಜ್‌ಕುಮಾರ್‌ರವರೊಂದಿಗೆ ಗೀತಾ ಶಿವರಾಜ್‌ಕುಮಾರ್ ರೋಡ್‌ಶೋನಲ್ಲಿ ಭಾಗವಹಿಸಲಿದ್ದಾರೆ.ಈ ರೋಡ್ ಶೋ ಸುಮಾರು ೨ ಕಿ.ಮೀ. ಇರುತ್ತದೆ ಎಂದರು.
ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏ.೩೦ರ ನಾಳೆ ಬೆಳಿಗ್ಗೆ ೧೦ ಗಂಟೆಗೆ ಹಾಸನದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ೧೧-೩೦ಕ್ಕೆ ಡಿವಿಎಸ್ ಕಾಂಪೋಸಿಟ್ ಕಾಲೇಜಿನ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ. ನಂತರ ಅವರು ಸೊರಬಕ್ಕೆ ತೆರಳುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ರವಿಕುಮಾರ್, ಮಧು, ಎಲ್. ಸತ್ಯನಾರಾಯಣ ರಾವ್, ಚಂದ್ರಶೇಖರ್ ಮುಂತಾದವರಿದ್ದರು.

ಏಳು ವಿಧಾನ ಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಗೆಲ್ಲಲಿದೆ

ಶಿವಮೊಗ್ಗ ಜಿಲ್ಲೆಯ ಎಲ್ಲಾ ಏಳು ವಿಧಾನ ಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಗೆಲ್ಲಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಭರವಸೆ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್- ಬಿಜೆಪಿಗೂ ಗ್ರಾಮಾಂತರದಲ್ಲಿ ಕಾಂಗ್ರೆಸ್- ಜೆಡಿಎಸ್‌ಗೂ ನೇರ ಸ್ಪರ್ಧೆ ಇರುತ್ತದೆ ಎಂದು ಶನಿವಾರ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿಗಳು ಈಗಾಲೇ ಪ್ರಚಾರ ಮುಂದುವರಿಸಿದ್ದು, ಕಾಂಗ್ರೆಸ್ ಪರ ಅಲೆ ಕಾಣುತ್ತಿದೆ. ಪಕ್ಷ ಬಿಟ್ಟು ಹೋದವರಿಂದ ಯಾವ ಪರಿಣಾಮವೂ ಆಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ನಾಯಕರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಮೇ ೨ಕ್ಕೆ ರಾಹುಲ್ ಗಾಂಧಿ ತೀರ್ಥಹಳ್ಳಿಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದರು
೨೧ ಮಂದಿ ಉಚ್ಚಾಟನೆ:
ಜಿಲ್ಲೆಯ ಸಾಗರ ಮತ್ತು ಶಿಕಾರಿಪುರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡುತ್ತಿದ್ದ ಪಕ್ಷದ ೨೧ ಕಾರ್ಯಕರ್ತರನ್ನು ೬ ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪ್ರಮುಖವಾಗಿ ಶಿಕಾರಿಪುರದ ಎಸ್.ಸಿ. ವೀರೇಶ್, ಉಮೇಶ್, ರಾಘವೇಂದ್ರ ನಾಯ್ಕ್ ಹಾಗೂ ಸಾಗರದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ. ರಾಜನಂದಿನಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹುನಗೋಡು ರತ್ನಾಕರ್ ಮುಂತಾದವರಿದ್ದಾರೆ. ಶಿಕಾರಿಪುರದಲ್ಲಿ ಸ್ವತಂತ್ರ ಅಭ್ಯರ್ಥಿ ನಾಗರಾಜ ಗೌಡರ ವಿರುದ್ಧ ಕ್ರಮಕ್ಕೆ ರಾಜ್ಯ ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದರು.

Ad Widget

Related posts

ವಿಐಎಸ್‌ಎಲ್ ಪುನರುಜ್ಜೀವನಕ್ಕೆ ಸಚಿವರಿಗೆ ಮನವಿ

Malenadu Mirror Desk

ಸಕ್ರೆಬೈಲ್ ಆನೆ ಗೀತಾ ಸಾವು

Malenadu Mirror Desk

ಅಮಿತ್ ಶಾ ಆಗಮನ:ತಯಾರಿ ಪರಿಶೀಲನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.