Malenadu Mitra
ರಾಜ್ಯ ಶಿವಮೊಗ್ಗ

ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ
ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭ

ಶಿವಮೊಗ್ಗ, ಮೇ.11 : ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿAದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಅಂಚೆ ಮತ ಎಣಿಕೆಗೆ ಸಂಬAಧಿಸಿದAತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. ಬೆಳಿಗ್ಗೆ 7 ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‌ಗಳು ಮತ್ತು ಸಹಾಯಕ ಚುನಾವಣಾಧಿಕಾರಿಯ ಟ್ಯಾಬುಲೇಷನ್ ಟೇಬಲ್ ಇರುತ್ತದೆ. ಮತ ಎಣಿಕೆ ಸ್ಥಳದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರಿಗೆ ಹಾಗೂ ಮತ ಎಣಿಕೆ ಏಜೆಂಟರಿಗೆ ಮಾತ್ರ ಪ್ರವೇಶಿಸಲು ಅವಕಾಶವಿದೆ.

ಅಂಚೆ ಮತಪತ್ರಗಳ ಎಣಿಕೆ ಮತ್ತು ಕಂಟ್ರೋಲ್ ಯುನಿಟ್ ಮೂಲಕ ಮತ ಎಣಿಕೆಯನ್ನು ಬೆಳಿಗ್ಗೆ 8 ಗಂಟೆಗೆ ಆರಂಭಿಸಲಾಗುವುದು. ಪ್ರತಿ ಮತ ಎಣಿಕೆ ಟೇಬಲ್‌ಗೆ ಒಬ್ಬ ಮೇಲ್ವಿಚಾರಕ, ಒಬ್ಬ ಸಹಾಯಕ ಮತ್ತು ಒಬ್ಬ ಮೈಕ್ರೋ ಅಬ್ಸರ್ವರ್ ನೇಮಕ ಮಾಡಿ ತರಬೇತಿ ನೀಡಲಾಗಿದೆ. ಇವಿಎಂ ಮತ ಎಣಿಕೆ ಪೂರ್ಣಗೊಂಡ ಬಳಿಕ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್‌ಗಳನ್ನು ಆಯ್ಕೆ ಮಾಡಿ ಎಣಿಕೆ ಮಾಡಲಾಗುವುದು. ಮತ ಎಣಿಕೆ ಹಾಲ್‌ನಲ್ಲಿ ಮೊಬೈಲ್ ಮತ್ತಿತರ ಎಲೆಕ್ಟಾçನಿಕ್ ವಸ್ತುಗಳನ್ನು ನಿರ್ಬಂಧಿಸಲಾಗಿದೆ. ಮತ ಎಣಿಕೆ ಆವರಣದ ಸುತ್ತ ಸೆಕ್ಷನ್ 144 ಜಾರಿಗಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ ಎಣಿಕೆ ಸುತ್ತು ವಿವರ:
ಶಿವಮೊಗ್ಗ ಗ್ರಾಮೀಣ ಕ್ಷೇತ್ರದಲ್ಲಿ 247 ಮತಗಟ್ಟೆಗಳಿದ್ದು 18 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಇದೇ ರೀತಿ ಭದ್ರವಾತಿ 253 ಮತಗಟ್ಟೆ 19 ಸುತ್ತು, ಶಿವಮೊಗ್ಗ 284 ಮತಗಟ್ಟೆ 21 ಸುತ್ತು, ತೀರ್ಥಹಳ್ಳಿ 258 ಮತಗಟ್ಟೆ 19 ಸುತ್ತು, ಶಿಕಾರಿಪುರ 234 ಮತಗಟ್ಟೆ 17 ಸುತ್ತು, ಸೊರಬ 239 ಮತಗಟ್ಟೆ 18 ಸುತ್ತು ಹಾಗೂ ಸಾಗರದಲ್ಲಿ 267 ಮತಗಟ್ಟೆಗಳಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿ ಅಭಿನಂದನೆ:
ಜಿಲ್ಲೆಯಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 1782 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, 8100 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ ಎಲ್ಲಾ ಮತದಾರರಿಗೆ ಹಾಗೂ ಸುಗಮವಾಗಿ ಮತದಾನ ಆಯೋಜಿಸಲು ಸಹಕರಿಸಿದ ಎಲ್ಲಾ ಅಧಿಕಾರಿ,ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Ad Widget

Related posts

ಬಜೆಟ್‌ನಲ್ಲಿ ನೀರಾವರಿಗೆ ಆದ್ಯತೆ

Malenadu Mirror Desk

ಅವೈಜ್ಞಾನಿಕ ಆಸ್ತಿ ತೆರಿಗೆ:ಕೆ.ವಿ.ವಸಂತಕುಮಾರ್

Malenadu Mirror Desk

ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ|| ಆರ್.ಸೆಲ್ವಮಣಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.