ಸೊರಬ ತಾಲೂಕಿನ ಆನವಟ್ಟಿ ಸಮೀಪದ ಕೋಟಿಪುರದ ಎವರಾನ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್
ಶಾಲೆಯ ವಿದ್ಯಾರ್ಥಿನಿ ದೀಪಿಕಾ ವಸಂತ ಸುಣಗಾರ್ ಅವರು ನವದೆಹಲಿಯ ತಲ್ಕಾ ತೋರ ಇಂಡೋರ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಟರ್ ನ್ಯಾಷನಲ್ ಕರಾಟೆ ಪಂದ್ಯಾವಳಿಯಲ್ಲಿ ಕುಮಿಟೆ ಫೈಟಿಂಗ್‌ನಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ
ಪದಕ ಪಡೆದು ಶಾಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ತರಬೇತುದಾರ ಚಂದ್ರಕಾಂತ್ ಭಟ್, ಶಾಲಾ ಅಧ್ಯಕ್ಷ ಕಾರ್ತಿಕ್ ಸಾಹುಕಾರ್ ಹಾಗೂ ಶಾಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.
previous post