Malenadu Mitra
ರಾಜ್ಯ ಶಿವಮೊಗ್ಗ

ಸಂವಿಧಾನ ದುರ್ಬಳಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಜು.೧೨ ರಂದು ಗಾಂಧಿಪ್ರತಿಮೆ ಎದುರು ಸತ್ಯಾಗ್ರಹ

ಶಿವಮೊಗ್ಗ: ರಾಷ್ಟ್ರೀಯ ನಾಯಕ ಹಾಗೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿ ಅವರ ಧ್ವನಿ ಹತ್ತಿಕ್ಕಲು ಸಂವಿಧಾನವನ್ನು ದುರ್ಬಳಕೆ ಮಾಡಿಕೊಂಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜು. ೧೨ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ ರವರೆಗೆ ಗಾಂಧಿಪಾರ್ಕ್‌ನಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮೌನ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್‌ಗಾಂಧಿಯವರಿಗೆ ಇರುವ ಜನಬೆಂಬಲ ಸಹಿಸದೆ ಹತಾಶರಾಗಿರುವ ಬಿಜೆಪಿ ನಾಯಕರಿಗೆ ರಾಜ್ಯದ ಜನ ಹೇಗೆ ಪಾಠ ಕಲಿಸಿದ್ದಾರೋ ಅದೇ ರೀತಿ ದೇಶದ ಜನ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ರಾಹುಲ್‌ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಮತ್ತು ಅನರ್ಹತೆಯನ್ನು ಕಾಂಗ್ರೆಸ್ ಮಾತ್ರವಲ್ಲ. ಇಡೀ ರಾಷ್ಟ್ರವೇ ಖಂಡಿಸುತ್ತಿದೆ. ಅವರ ಜನಪರ ಹೋರಾಟದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಲಾಗುತ್ತಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ನಾವು ಒಟ್ಟಾಗಿ ನಿಂತು ರಾಹುಲ್ ಗಾಂಧಿ ಅವರು ಏಕಾಂಗಿಯಲ್ಲ. ಈ ಹೋರಾಟದಲ್ಲಿ ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಲು ದೇಶಾದ್ಯಂತ ಅಂದು ಮೌನ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತುವ ವಿರೋಧ ಪಕ್ಷಗಳ ನಾಯಕರ ವಿರುದ್ಧ ಸಿಬಿಐ, ಇ ಡಿ ಯಂತಹ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷದ ನಾಯಕರು ಒಗ್ಗಟ್ಟಿನ, ನಿರ್ಭೀತ ಮತ್ತು ರಾಜಿರಹಿತ ಹೋರಾಟವನ್ನು ಬೆಂಬಲಿಸಿ ಮೌನಸತ್ಯಾಗ್ರಹವನ್ನ ಹಮ್ಮಿಕೊಂಡಿದ್ದೇವೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಮೆಹಕ್ ಶರೀಫ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ, ಮುಖಂಡರಾದ ಟಿ. ಕೃಷ್ಣಪ್ಪ ಮಂಜುನಾಥಬಾಬು, ಸಿ.ಎಸ್. ಚಂದ್ರಭೂಪಾಲ, ವಿನಾಯಕ ಮೂರ್ತಿ, ಹೆಚ್.ಎಂ. ಮಧು, ಚಂದನ್, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Ad Widget

Related posts

ಕಾಗೋಡು ಚಳವಳಿ-ರಾಜಕಾರಣ ಮುಂದಣ ಹೆಜ್ಜೆ ಏ,18 ಕ್ಕೆ ಸಾಗರದಲ್ಲಿ ಐತಿಹಾಸಿಕ ಸತ್ಯಾಗ್ರಹ ಸ್ಮರಣೆ

Malenadu Mirror Desk

ಶಾಸಕರಿಗೆ ಹೆಚ್ಚುವರಿ ಹಾಗೂ ನಾಮನಿರ್ದೇಶಿತ ಸದಸ್ಯರಿಗೆ ಅನುದಾನ ಒದಗಿಸಲು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಸಭೆ ಒತ್ತಾಯ

Malenadu Mirror Desk

ಶಿವಮೊಗ್ಗದಲ್ಲಿ ಮೊದಲ ಲಸಿಕೆ ಯಾರು ತಗೊಂಡ್ರು ಗೊತ್ತಾ ?

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.