Malenadu Mitra
ರಾಜ್ಯ

ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ
ಇಬ್ಬರ ಬಂಧನ: ಎಸ್ಪಿ ಮಿಥುನ್ ಕುಮಾರ್

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು ೫೦ ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಬಂಧಿತ ಆರೋಪಿಗಳು ಎಂದು ತಿಳಿಸಿದರು.
ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ. ಕೃಷಿ ಕೆಲಸ ಮಾಡಿಕೊಂಡಿದ್ದವರು. ಪ್ರತಿಮೆ ಧ್ವಂಸ ಮಾಡಿದ ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು ಎಂದು ಮಾಹಿತಿ ನೀಡಿದರು.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ. ತಾಂತ್ರಿಕ ಹಾಗೂ ಸ್ಥಳೀಯ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿಮೆ ಮರು ಸ್ಥಾಪನೆ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಭದ್ರಾವತಿ ಉಪ ವಿಭಾಗ ಡಿವೈಎಸ್‌ಪಿ ಹಾಗೂ ಸಿಎನ್‌ಎನ್ ಠಾಣೆ ಇನ್ಸ್‌ಪೆಕ್ಟರ್ ದೀಪಕ್ ಇದ್ದರು.

Ad Widget

Related posts

ಗೋಹತ್ಯೆ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ : ಪ್ರಭು ಬಿ.ಚವ್ಹಾಣ್

Malenadu Mirror Desk

ನಿರ್ದಿಷ್ಟ ಧರ್ಮ ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯಿದೆ: ಸಚಿವ ಈಶ್ವರಪ್ಪ ಸಮರ್ಥನೆ

Malenadu Mirror Desk

ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವಿರಬೇಕು: ಐಎಎಸ್ ಅಧಿಕಾರಿ ತೇಜಸ್ವಿನಾಯ್ಕ್, ತರಳೀಮಠದಲ್ಲಿ ಮೌಲ್ಯಾಧರಿತ ಶಿಕ್ಷಣ ಕುರಿತ ವಿಚಾರಸಂಕಿರಣ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.