ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ನಾಯಕ ಎಂ.ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಶ್ರೀಕಾಂತ್ ಅವರು , ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ಸೇರುವರೆಂಬ ವದಂತಿ ಹಬ್ಬಿತ್ತು. ಆದರೆ ಈಗ ಕಾಲ ಕೂಡಿಬಂದಿದೆ. ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಶ್ರೀಕಾಂತ್ ಎರಡು ದಶಕಗಳ ಜೆಡಿಎಸ್ ಬಾಂಧವ್ಯ ಕಳಚಿಕೊಂಡಿದ್ದಾರೆ