Malenadu Mitra
ರಾಜ್ಯ ಶಿವಮೊಗ್ಗ

ಕಣ್ಣು,, ಕಿವಿ, ಬಾಯಿ ಇಲ್ಲದ ಸರ್ಕಾರ: ಸಂಸದ ರಾಘವೇಂದ್ರ,ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ

ಶಿವಮೊಗ್ಗ: ರೈತರ ಹೊಲಗದ್ದೆಗಳಿಗೆ ಹೋಗಿ ರೈತರ ಸಂಕಷ್ಟಗಳನ್ನು ಕೇಳಬೇಕಾದ ಸಿಎಂ ಹಾಗೂ ಡಿಸಿಎಂ ಗ್ಯಾರಂಟಿ ಯೋಜನೆಗಳ ಮೂಲಕ ದುಡ್ಡು ಹೇಗೆ ಹೊಡೆಯಬೇಕು ಎಂದು ಯೋಚಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.
ಬಿಜೆಪಿ ರೈತಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ೧೩೦ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸರ್ಕಾರದ ವರದಿಯೆ ಹೇಳುತ್ತಿದೆ. ನೀವು ಕೊಡುವ ಭಿಕ್ಷೆಗೆ ಆತ್ಮಹತ್ಯೆ ಮಾಡಿಕೊಳ್ಳುವ ದುರ್ಗತಿ ರೈತರಿಗೆ ಬಂದಿಲ್ಲ. ರಾಜ್ಯದಲ್ಲಿ ಮಳೆಯಾಗಿಲ್ಲ. ಬರಗಾಲದ ಅಧ್ಯಯನ ಮಾಡುವುದಕ್ಕೆ ಸರ್ಕಾರಕ್ಕೆ ಎಷ್ಟು ದಿನ ಬೇಕ.ಕಳೆದ ತಿಂಗಳೇ ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದರು ಎಂದರು.

ರಾಜ್ಯದಲ್ಲಿ ಕಂದಾಯ ಇಲಾಖೆ ಸತ್ತು ಹೋಗಿದೀಯಾ. ಎಲ್ಲೆಲ್ಲಿ ಬರಗಾಲ, ಅತಿವೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೀರಾ. ಯಾವುದೇ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ರೈತರ ಕಷ್ಟ ಆಲಿಸುತ್ತಿಲ್ಲ ರೈತರ ಶಾಪ ನಿಮಗೆ ತಟ್ಟುತ್ತದೆ ಎಂದು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.
ಸಿಎಂ ಕಚೇರಿ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಕಾಂಗ್ರೆಸ್ ನವರು ದುಡ್ಡು ಹೊಡೆಯುವುದರಲ್ಲಿ ನಿಸೀಮರು. ಎಲ್ಲ ಟ್ರಾನ್ಸಫರ್ ನಾನೆ ಮಾಡುತ್ತೇನೆ ಎಂದು ಸಿಎಂ ಹೇಳುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಿಂದ ಜನರಿಗೆ ಟೋಪಿ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆ ಮೂಲಕ ದುಡ್ಡು ಹೊಡೆಯುವುದಕ್ಕೆ ನಿಂತಿದ್ದಾರೆ. ಲೂಟಿ ಹೊಡೆಯುವುದು ಲೆಕ್ಕಕ್ಕೆ ಸಿಗಬಾರದು ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಬರುವ ದಿನಗಳಲ್ಲಿ ಸಚಿವರು, ಶಾಸಕರ ಮನೆ ಮುಂದೆ ಧರಣಿ ಮಾಡಲಾಗುವುದು. ಶಿವಮೊಗ್ಗದಲ್ಲಿ ಆಶ್ರಯ ಯೋಜನೆಯಡಿ ಎರಡು ತಿಂಗಳಲ್ಲಿ ಮನೆ ನಿರ್ಮಾಣ ಮಾಡಬೇಕು. ಇಲ್ಲವಾದಲ್ಲಿ ಮೂರು ಸಾವಿರ ಜನರನ್ನೂ ಕರೆದುಕೊಂಡು ಜಿಲ್ಲೆಗೆ ಬರುವ ಸಚಿವರಿಗೆ ಘೇರಾವ್ ಹಾಕಲಾಗುವುದು. ಜೈಲ್ ಭರೊ ಕಾರ್ಯಕ್ರಮ ನಡೆಸಲಾಗುವುದು. ಡಿಕೆಶಿ, ಸಿದ್ದರಾಮಯ್ಯ ಬಂದರೆ ಮುತ್ತಿಗೆ ಹಾಕುತ್ತೇವೆ ಎಂದರು.

ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ರೈತರಿಗೆ ನೀರು, ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುತ್ತಿತ್ತು. ಒಂದು ಕಡೆ ಗ್ಯಾರಂಟಿ ನೀಡುತ್ತಾ, ಇನ್ನೊಂದು ಕಡೆ ತೆರಿಗೆ ಹಾಕುತ್ತಿದ್ದಾರೆ. ೫ ಲಕ್ಷಕ್ಕಾಗಿ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಪುಟ ಸಚಿವರೊಬ್ಬರು ಹಗುರವಾದ ಹೇಳಿಕೆ ನೀಡುತ್ತಾರೆ. ಕಣ್ಣು,, ಕಿವಿ, ಬಾಯಿ ಇಲ್ಲದ ಸರ್ಕಾರಕ್ಕೆ ಎಚ್ಚರಿಸುವ ಕೆಲಸವನ್ನು ಈ ಪ್ರತಿಭಟನೆಯಿಂದ ಮಾಡುತ್ತಿದ್ದೇವೆ. ಇದಕ್ಕೆ ಸರ್ಕಾರ ಅವಕಾಶ ನೀಡಬಾರದು. ರೈತರಿಗೆ ಕೇಂದ್ರದಿಂದ ಮಾಡಬೇಕಾದ ಎಲ್ಲ ಸಹಾಯ ಮಾಡಲಾಗುವುದು ಎಂದರು.

ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ,ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಭಾರತಿ ಶೆಟ್ಟಿ, ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕ ಅಶೋಕ್ ನಾಯ್ಕ್ ,ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ ಮೇಘರಾಜ್, ರೈತಮೋರ್ಚಾ ಜಿಲ್ಲಾಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ಪ್ರಮುಖರಾದ ಎಸ್ ದತ್ತಾತ್ರಿ, ಮಂಜುಳಾ ಸೇರಿದಂತೆ ಹಲವರಿದ್ದರು.

Ad Widget

Related posts

ಅಡಕೆ ಬೆಳೆಯಿಂದಾಗಿ ಒಕ್ಕಲಿಗರ ಬಾಳು ಹಸನು, ಒಕ್ಕಲಿಗರ ಯುವ ಸಮಾವೇಶ ಉದ್ಘಾಟಿಸಿದ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ

Malenadu Mirror Desk

ಸಕ್ರೆಬೈಲ್ ಆನೆ ಗೀತಾ ಸಾವು

Malenadu Mirror Desk

ಸುರೇಶ್ ಬಾಳೇಗುಂಡಿಅವರಿಗೆ ಸಮಾಜ ರತ್ನ ಪ್ರಶಸ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.