Malenadu Mitra
ರಾಜ್ಯ ಶಿವಮೊಗ್ಗ

ಪ್ರಣವಾನಂದ ಸ್ವಾಮೀಜಿ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಜಿಲ್ಲಾ ಈಡಿಗ ಸಂಘ

ಶಿವಮೊಗ್ಗ: ಈಡಿಗ ಸಮಾಜದ ಸ್ವಾಮೀಜಿ ಎಂದು ಹೇಳಿಕೊಳ್ಳುತ್ತಿರುವ ಪ್ರಣವಾನಂದ ಸ್ವಾಮೀಜಿ ಸಚಿವ ಮಧು ಬಂಗಾರಪ್ಪ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಬಲವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಹೇಳಿದರು.
ಅವರು ಈಡಿಗ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಣವಾನಂದ ಸ್ವಾಮೀಜಿ ಈಡಿಗ ಸಮಾಜದ ಅಧಿಕೃತ ಸ್ವಾಮೀಜಿಯೇ ಅಲ್ಲ, ಅವರು ಸ್ವಯಂ ಸ್ವಾಮೀಜಿ ಎಂದು ಘೋಷಿಸಿಕೊಂಡು ಓಡಾಡುತ್ತಿದ್ದಾರೆ. ಈತ ಸಮುದಾಯದಲ್ಲಿ ಒಡಕು ಮೂಡಿಸುತ್ತಿದ್ದಾರೆ. ನಾರಾಯಣಗುರುಗಳ ಚಿಂತನೆಗೆ ವಿರುದ್ಧವಾಗಿ ಈಡಿಗರ ಹೆಂಗಸರು ಐದು ಮಕ್ಕಳನ್ನು ಹೆರಬೇಕು. ಸೇಂಧಿ ಇಳಿಸಲು ಅವಕಾಶ ಕೊಡಬೇಕು ಇತ್ಯಾದಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಿರಬೇಕಾದ ಸಾತ್ವಿಕ ನಡೆ ಅವರದಲ್ಲ. ರಾಜಕೀಯ ವ್ಯಕ್ತಿಯಂತೆ ಮಾತನಾಡುತ್ತಾರೆ ಎಂದು ಆರೋಪಿಸಿದರು.

ಮಧು ಬಂಗಾರಪ್ಪ ಅವರು ಈ ನಾಡಿನ ಅಪರೂಪದ ರಾಜಕಾರಣಿ ದಿ. ಬಂಗಾರಪ್ಪನವರ ಪುತ್ರರಾಗಿದ್ದಾರೆ. ಶಾಸಕರಾಗಿ, ಸಚಿವರಾಗಿ ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣದ ಕೆಲಸ ಪುಣ್ಯದ ಕೆಲಸ ಎಂದುಕೊಂಡಿದ್ದಾರೆ. ರೈತರ ಪರ ಕೆಲಸ ಮಾಡಿದ್ದಾರೆ. ನಾರಾಯಣ ಗುರು ಜಯಂತಿಯನ್ನು ಸರ್ಕಾರದಿಂದ ಹಮ್ಮಿಕೊಳ್ಳಲು ಕಾರಣರಾಗಿದ್ದಾರೆ. ಜಾತಿಗಳ ಮೀರಿ ಕೆಲಸ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಈ ಪ್ರಣವಾನಂದ ಸ್ವಾಮೀಜಿ ಇಲ್ಲ ಸಲ್ಲದ ಮಾತನಾಡಿ ಈಡಿಗ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಸ್ವಾಮೀಜಿ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ನಮ್ಮ ಸಮಾಜದ ಅಧಿಕೃತ ಸ್ವಾಮೀಜಿ ಎಂದರೆ ವಿಖ್ಯಾತನಂದ ಸ್ವಾಮೀಜಿ ಆಗಿದ್ದಾರೆ. ಇವರನ್ನು ನಾವು ಪೀಠಾಧ್ಯಕ್ಷರನ್ನಾಗಿ ಮಾಡಿದ್ದೇವೆ. ನಮ್ಮ ಸಮಾಜದ ಎಲ್ಲಾ ಉಪ ಪಂಗಡಗಳ ಮುಖಂಡರು ಒಪ್ಪಿಕೊಂಡು ಪೀಠಾಧ್ಯಕ್ಷರನ್ನಾಗಿ ಮಾಡಿದ್ದೇವೆ. ಪ್ರಣವಾನಂದ ಸ್ವಾಮೀಜಿಯ ಹೇಳಿಕೆಗೂ, ಈಡಿಗ ಸಮಾಜಕ್ಕೂ ಯಾವ ಸಂಬಂಧವೂ ಇಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಈಡಿಗ ಸಮಾಜದ ಪ್ರಮುಖರಾದ ಎಸ್.ವಿ. ರಾಮಚಂದ್ರ, ಜಿ.ಡಿ. ಮಂಜುನಾಥ್, ಎನ್.ಪಿ.ಧರ್ಮರಾಜ್, ಮಹೇಂದ್ರ, ಬ್ಲೂಮೂನ್ ಮಹೇಶ್, ಕಾಗೋಡು ರಾಮಪ್ಪ ಮತ್ತಿತರರಿದ್ದರು.

Ad Widget

Related posts

ರಾಜರತ್ನನಿಗೆ ಶಿವಮೊಗ್ಗ ಜನರ ಭಾವುಕ ನಮನ, ಸದ್ಭಾವನ ಟ್ರಸ್ಟ್ ನಿಂದ ಯಶಸ್ವೀ ಅಪ್ಪು-ಅಮರ ಕಾರ್ಯಕ್ರಮ

Malenadu Mirror Desk

ಶಿವಮೊಗ್ಗದಲ್ಲಿ ಗಾಂಜಾ ಪ್ರಕರಣ ಹೆಚ್ಚಿವೆ, ಹಂಗಂತ ಈಶ್ವರಪ್ಪರನ್ನು ಡ್ರಗ್ಸ್ ಪೆಡ್ಲರ್ ಅನ್ನೊಕಾಗತ್ತಾ ?

Malenadu Mirror Desk

ಯುವ ವೈದ್ಯ ಆತ್ಮಹತ್ಯೆ, ಕಾರಣ ತಿಳಿದು ಬಂದಿಲ್ಲ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.