ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ನಲ್ಲಿ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಹತ್ತಿರ ಇರುವ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ.
ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯಿಲ್ಲ. ಏನಾಗಿದೆ ಎಂಬುದರ ಬಗ್ಗೆಯು ಕೆಲವೊಂದು ಅನುಮಾನಗಳು ಮೂಡುತ್ತಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸ್ಪಷ್ಟತೆ ನೀಡಬೇಕಿದೆ
ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (63), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು