Malenadu Mitra
ರಾಜ್ಯ ಶಿವಮೊಗ್ಗ

ಕಲ್ಲುತೂರಾಟ ಖಂಡಿಸಿ ಅ.12 ಕ್ಕೆ ಬಿಜೆಪಿ ಪ್ರತಿಭಟನಾ ಸಭೆ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಅ.೧೨ರಂದು ಬೆಳಿಗ್ಗೆ ೧೧ ಗಂಟೆಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಾಡೈಸ್ ಬಳಿ ಪ್ರತಿಭಟನೆ ಹಾಗೂ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರ ಗಲಭೆಯನ್ನು ಇಡೀ ರಾಜ್ಯವೇ ನೋಡುತ್ತಿದೆ. ಘಟನಾವಳಿಗಳು ನಡೆಯುವ ಮುನ್ನ ಯಾವ ಮುಂಜಾಗ್ರತೆಯನ್ನೂ ವಹಿಸಲಿಲ್ಲ. ಘಟನೆಯ ನಂತರ ಸಚಿವರಾದ ಮಧು ಬಂಗಾರಪ್ಪ, ರಾಮಲಿಂಗಾರೆಡ್ಡಿ, ಗೃಹಮಂತ್ರಿ ಪರಮೇಶ್ವರ್ ಸೇರಿದಂತೆ ಹಲವರು ಅಸಡ್ಡೆಯ ಹೇಳಿಕೆ ನೀಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ ರಾಗಿಗುಡ್ಡದಲ್ಲಿ ನಡೆದದ್ದೂ ಇದೇ. ಸರ್ಕಾರ ಓಲೈಕೆಯ ಸರ್ಕಾರವಾಗಿದೆ ಎಂದರು.

ರಾಗಿಗುಡ್ಡದಲ್ಲಿ ಹಿಂದೂ ಮತ್ತು ಮುಸ್ಲಿಂ ಬಾಂಧವರು ಒಟ್ಟಾಗಿಯೇ ಇದ್ದರು. ಅನೇಕ ಹಿಂದೂಗಳು ಮುಸ್ಲಿಂಮರಿಗೆ ಮನೆ ಬಾಡಿಗೆಗೆ ನೀಡಿದ್ದಾರೆ. ಆದರೆ ಘಟನೆಯ ನಂತರ ಅವರ ನಡವಳಿಕೆಗಳೇ ಬದಲಾಗಿವೆ. ಬಿಜೆಪಿಯು ರಾಜ್ಯಧ್ಯಕ್ಷ ಕಟೀಲ್ ಸೇರಿದಂತೆ ಸ್ಥಳೀಯ ಮುಖಂಡರ ಜೊತೆಗೂಡಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಿದೆ. ಹಿಂದೂಗಳು ತಮ್ಮ ಆರ್ತನಾದವನ್ನು ಹೇಳಿಕೊಂಡಿದ್ದಾರೆ. ಹೊರಗಡೆಯ ಶಕ್ತಿಗಳು ಇದಕ್ಕೆ ಕಾರಣವಾಗಿದೆ. ಈ ಎಲ್ಲಾ ಘಟನೆಗಳನ್ನು ಖಂಡಿಸಿ. ಅ.೧೨ರಂದು ಪ್ರತಿಭಟನೆ ಮತ್ತು ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಪ್ರತಿಭಟನಾ ಸಭೆಗೆ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಬಿ.ವೈ.ವಿಜಯೇಂದ್ರ, ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಜಿಲ್ಲೆಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಪ್ರಮುಖರಾದ ಎಸ್. ದತ್ತಾತ್ರಿ, ಶಿವರಾಜ್, ಬಿ.ಕೆ. ಶ್ರೀನಾಥ್, ಹೃಷಿಕೇಶ್ ಪೈ, ಜಗದೀಶ್, ವಿಶ್ವಾಸ್, ಶಶಿಧರ್, ಕೆ.ವಿ. ಅಣ್ಣಪ್ಪ ಇದ್ದರು.

ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರು ಅಮಾನತು

ಶಿವಮೊಗ್ಗ: ರಾಗಿಗುಡ್ಡ ಗಲಭೆ ವೇಳೆ ಕರ್ತವ್ಯ ಲೋಪ ಎಸೆಗಿದ ಆರೋಪದ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಪೂರ್ವವಲಯ ಐಜಿ ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯ ಸಿಪಿಐ ಅಭಯ್ ಪ್ರಕಾಶ್, ಸಿಬ್ಬಂದಿಗಳಾದ ಕಾಶಿನಾಥ್, ರಂಗನಾಥ್ ಮತ್ತು ಶಿವರಾಜ್ ಅವರನ್ನು ಅಮಾನತು ಮಾಡಲಾಗಿದೆ. ಕಲ್ಲು ತೂರಾಟ ಪ್ರಕರಣ ಹಿನ್ನೆಲೆ ಇವರು ಸರಿಯಾಗಿ ಕರ್ತವ್ಯ ನಿಭಾಯಿಸಿಲ್ಲ ಎಂದು ಅಮಾನತು ಮಾಡಲಾಗಿದೆ.
ಅ.೧ರಂದು ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿತ್ತು. ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ೮ ಮಂದಿ ಗಾಯಗೊಂಡಿದ್ದರು. ಆ ಬಳಿಕ ನಗರದಲ್ಲಿ ೧೪೪ ಸೆಕ್ಸನ್ ಜಾರಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ೬೦ ಜನರ ಬಂಧನವಾಗಿತ್ತು ಮತ್ತು ೨೪ ಎಫ್‌ಐಆರ್‌ಗಳು ದಾಖಲಾಗಿತ್ತು.

Ad Widget

Related posts

ಉತ್ತಮ ಪರಿಸರ ನೀಡುವ ಮೂಲಕ ಧನ್ಯರಾಗಬೇಕು : ಅನುರಾಧ

Malenadu Mirror Desk

ಧರ್ಮದ ಹೆಸರಲ್ಲಿ ರಾಜಕಾರಣ ಮಾಡುವ ಈಶ್ವರಪ್ಪರ ಕೊಡುಗೆ ಶೂನ್ಯ , ಶಿವಮೊಗ್ಗದಲ್ಲಿ ಆಸ್ತಿ ಮಾಡಿದ್ದೇ ಅವರ ಹೆಗ್ಗಳಿಕೆ ಎಂದ ಮಾಜಿ ಶಾಸಕ

Malenadu Mirror Desk

ಶಿವಮೊಗ್ಗದಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಕೆ.ಎಸ್.ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.