ಶಿವಮೊಗ್ಗ: ಭಾರತದ ಪ್ರವಾಸದಲ್ಲಿರುವ ಫಿನ್ ಲ್ಯಾಂಡ್ ದೇಶದ ಶಿಕ್ಷಣ ಸಚಿವರಾದ ಅನ್ನಾ ಮಾಜಾ ಹೆನ್ರಿಕ್ಸನ್ ಅವರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರನ್ನು ಮಂಗಳವಾರ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಈ ಸಂದರ್ಭ ಎರಡೂ ದೇಶಗಳಲ್ಲಿರುವ ಶಿಕ್ಷಣ ವ್ಯವಸ್ಥೆ, ಸುಧಾರಣೆ ಹಾಗೂ ತಂತ್ರಜ್ಞಾನದ ಮಾಹಿತಿಯನ್ನು ಹಂಚಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಉಪಸ್ಥಿತರಿದ್ದರು.