Malenadu Mitra
ರಾಜ್ಯ ಶಿವಮೊಗ್ಗ

ಗ್ಯಾರಂಟಿ ಪ್ರಚಾರದಲ್ಲೇ ಸರಕಾರದ ಕಾಲಹರಣ: ಸಂಸದ ರಾಘವೇಂದ್ರ ಆರೋಪ

ಶಿವಮೊಗ್ಗ :ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಅಸಮರ್ಥ ಸರಕಾರ. ಬರಗಾಲ ಎದುರಿಸುವ ದಿಕ್ಕಿನಲ್ಲಿ ಸ್ಪಷ್ಟ ನೀತಿ, ಗಂಭೀರತೆ ಕಾಣ್ತಿಲ್ಲ.ಯಾವುದೇ ಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಯ ಅಡ್ವರ್ಟೈಸ್ ನಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ದೂರಿದರು.
ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ತನ್ನ ಪಾಲಿನ ಪರಿಹಾರ ನೀಡದೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದರು.
ಈಗ ಸರ್ಕಾರ ರೈತರಿಗೆ ೭ಗಂಟೆ ತ್ರೀಫೇಸ್ ವಿದ್ಯುತ್ ನೀಡುವುದಾಗಿ ಪ್ರಕಟಿಸಿದೆ. ಇದೇ ೭ ಗಂಟೆ ಜೂನ್, ಜುಲೈ, ಆಗಸ್ಟ್‌ನಲ್ಲಿ ನೀಡಿದ್ದರೆ ಬೆಳೆಗಳು ಒಣಗುತ್ತಿರಲಿಲ್ಲ. ಈಗ ಒಣಗಿ ರೈತರಿಗೆ ಭಾರೀ ನಷ್ಟವಾಗಿದೆ ಎಂದರು.
ರಾಜ್ಯದಲ್ಲಿ ಕೇಂದ್ರದಿಂದ ತಂಡ ಬಂದು ಬರ ಅಧ್ಯಯನ ಮಾಡಿದ್ದು, ಈ ಅಧ್ಯಯನದ ವರದಿಯಂತೆ ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ಕಾನೂನು ಪ್ರಕಾರ ಬಿಡುಗಡೆ ಮಾಡಲಿದೆ. ಪರಿಹಾರವನ್ನು ನೀಡದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಗೋಶಾಲೆಗಳಿಗೆ ನೀರು ಮತ್ತು ಮೇವಿನ ವ್ಯವಸ್ಥೆಯನ್ನು ಮಾಡಬೇಕು ಮತ್ತು ಮಳೆ ಇಲ್ಲದೆ ಒಣಗಿರುವ ರೈತರ ಬೆಳೆಯನ್ನು ಕೊನೇಪಕ್ಷ ಮೇವಿಗಾಗಿಯಾದರೂ ರೈತರಿಗೆ ಹಣ ನೀಡಿ ಖರೀದಿಸಬೇಕು. ಕೇಂದ್ರ ಸರ್ಕಾರದ ಬಗ್ಗೆ ಗೂಬೆ ಕೂರಿಸುವುದನ್ನು ಬಿಡಬೇಕು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ೨೦೦೬ರಿಂದ ೨೦೧೪ರ ವರೆಗೆ ರಾಜ್ಯಕ್ಕೆ ಕೇವಲ ೨೨೫೦ಕೋಟಿ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ೨೦೧೪ರಿಂದ ೨೨ರ ವರೆಗೆ ಒಟ್ಟು ೧೩,೫೦೦ಕೋಟಿ ರೂ. ರಾಜ್ಯಕ್ಕೆ ನೀಡಿದೆ ಎಂದ ಅವರು, ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಮುಂದಿನ ಬೆಳೆ ಬೆಳೆಯುವ ಬಗ್ಗೆ ತಜ್ಞರಿಂದ ಮಾಹಿತಿ ನೀಡಬೇಕು ಎಂದರು.

ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಸರ್ಕಾರ ರೈತರ ನೆರವಿಗೆ ಬರುವ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರತಿ ಜಿಲ್ಲೆಯಲ್ಲೂ ಬಿಜೆಪಿ ಬೀದಿಗಿಳಿದ ಹೋರಾಟ ನಡೆಸುತ್ತದೆ ಎಂದು ಎಚ್ಚರಿಸಿದಅವರು, ಹಾಗೆಯೇ ತೋಟಗಾರಿಕೆ ಬೆಳೆಗಳಿಗೆ ಕೂಡ ಹಾನಿಯಾಗಿದೆ. ಅಡಿಕೆ ಬೆಳೆಗಾರರುತೊಂದರೆಯಲ್ಲಿದ್ದಾರೆ. ಈ ಬಗ್ಗೆಯೂ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಕ್ಯಾಪ್ಟನ್ ಲೆಸ್ ಬಿಜೆಪಿ ಬರ ಅಧ್ಯಯನ ಮಾಡಿ ಏನು ಪ್ರಯೋಜನ ಸಚಿವ ಮಧು ಬಂಗಾರಪ್ಪ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,ಯುದ್ದದ ಸಂದರ್ಭದಲ್ಲು ಕ್ಯಾಪ್ಟನ್ ಒಬ್ಬನೇ ಯುದ್ದ ಮಾಡಲು ಆಗಲ್ಲ. ಸೈನಿಕರ ಅವಶ್ಯಕತೆ ಸಹ ಇರುತ್ತದೆ. ನಮ್ಮ ಸೈನಿಕರು ಈಗಾಗಲೇ ಫೀಲ್ಡ್ ಗೆ ಇಳಿದಾಗಿದೆ. ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರವಾಸ ಮಾಡ್ತಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ಮಾಜಿ ಶಾಸಕರಾದ ಭಾನುಪ್ರಕಾಶ್, ಅಶೋಕ್ ನಾಯ್ಕ, ಪ್ರಮುಖರಾದ ಗಿರೀಶ್ ಪಟೇಲ್, ಬಿ.ಕೆ. ಶ್ರೀನಾಥ್, ವಿರೂಪಾಕ್ಷಪ್ಪ ಇನ್ನಿತರರಿದ್ದರು.


ಜಿಲ್ಲೆಯ ೭ ತಾಲೂಕಿನಲ್ಲಿ ಒಟ್ಟು ೪೧೫೩೦ ಹೆಕ್ಟೇರ್ ಭತ್ತ ಒಣಗಿಹೋಗಿ ೧೯೨ಕೋಟಿ ರೂ. ಹಾಗೂ ೩೮,೨೪೦ ಹೆಕ್ಟೇರ್ ಮೆಕ್ಕೆಜೋಳ ನಾಶವಾಗಿ ೨೩೦ ಕೋಟಿ ರೂ.ನ ಬೆಳೆ ನಷ್ಟವಾಗಿದೆ. ಇದಕ್ಕೆ ಪರಿಹಾರವನ್ನು ರಾಜ್ಯಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಬಿಡುಗಡೆಯಾದಹಣ ಕಡಿಮೆಯಾಗಿ ರೈತರಿಗೆ ಅನ್ಯಾಯ ಮಾಡಿದೆ.


-ಬಿ.ವೈ ರಾಘವೇಂದ್ರ

Ad Widget

Related posts

ಹಂಚಿ ತಿನ್ನುವುದರಲ್ಲಿ ಪರಮಸುಖ: ರೇಣುಕಾನಂದ ಶ್ರೀ

Malenadu Mirror Desk

ಹಳೆ ವಿದ್ಯಾರ್ಥಿಗಳು ಕಲಿತ ಕಾಲೇಜಿಗೆ ನೆರವಾಗಬೇಕು

Malenadu Mirror Desk

ಮೂರು ದಿನ ಶಾಲೆಗಳಿಗೆ ರಜೆ, ಮಾರ್ಚ್ 22-23ರಂದು ಮಾರಿಕಾಂಬಾ ಜಾತ್ರೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.