Malenadu Mitra
ರಾಜ್ಯ ಶಿವಮೊಗ್ಗ

ಬೆಂಗಳೂರಿನಲ್ಲಿ ನಡೆವ ಈಡಿಗರ ಜಾಗೃತಿ ಸಮಾವೇಶಕ್ಕೆ ಜಿಲ್ಲೆಯಿಂದ ಸಹಸ್ರಾರು ಮಂದಿ: ಶ್ರೀಧರ್ ಹುಲ್ತಿಕೊಪ್ಪ


ಶಿವಮೊಗ್ಗ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ವತಿಯಿಂದ ಡಿ.೧೦ರಂದು ಬೆಳಗ್ಗೆ ೧೧ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಘದ ೭೫ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಬೃಹತ್ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದ ಸಂಘದ ಜಿಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚಿತ್ರನಟ ಡಾ.ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಎಚ್. ಹಾಲಪ್ಪ, ಬಿ.ಸ್ವಾಮಿರಾವ್, ಡಾ.ಜಿ.ಡಿ.ನಾರಾಯಣಪ್ಪ, ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತರು, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ.ಎಸ್.ರಾಮಪ್ಪ ಹಾಗೂ ಸಮಾಜದ ಹಿರಿಯ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡರವರು ಅಧ್ಯಕ್ಷತೆ ವಹಿಸುವರು. ಬೆಂಗಳೂರಿನಲ್ಲಿ ನಡೆಯುವ ಈ ಸಮಾವೇಶದಲ್ಲಿ ಜಿಲ್ಲೆಯಿಂದ ೨೫ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ೫೦ ಲಕ್ಷಕ್ಕೂ ಹೆಚ್ಚು ಈಡಿಗ ಸಮುದಾಯದವರಿದ್ದಾರೆ. ಆದರೂ ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಈ ನಾಡು ಕಟ್ಟುವ ಕಾಯದಲ್ಲಿ ಸಮುದಾಯದ ಪಾತ್ರ ಹಿರಿದಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರ ರಾಜಕೀಯ ಇಚ್ಚಾಶಕ್ತಿಯಿಂದಾಗಿ ಜನರ ಹಾಗೂ ರೈತಪರ ಯೋಜನೆಗಳನ್ನು ರೂಪಿಸಿ ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಸಮುದಾಯಕ್ಕೆ ಶಕ್ತಿ ನೀಡುವ ಕೆಲಸವಾಗಿದೆ. ಆದರೂ, ಶರಾವತಿ, ಚಕ್ರ, ವರಾಹಿ, ಸಾವೆಹಕ್ಕಲು ಮುಳುಗಡೆ ಸಂತ್ರಸ್ತರ ಸಮಸ್ಯೆ, ಬಗರ್ ಹುಕುಂ ರೈತರಿಗೆ ಹಕ್ಕುಪತ್ರ, ಈಡಿಗ ಅಭಿವೃದ್ಧಿ ನಿಗಮ, ಸಮುದಾಯದ ಶಕ್ತಿ ಕೇಂದ್ರ ಶ್ರೀಕ್ಷೇತ್ರ ಸಿಗಂದೂರು ಭೂ ಸಮಸ್ಯೆಯಂತಹ ಇನ್ನೂ ಹಲವು ಗಂಭೀರ ಸಮಸ್ಯೆಗಳಿಗೆ ಪರಹಾರ ನೀಡುವಂತೆ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್, ಗಣಪತಿ ಹುಲ್ತಿಕೊಪ್ಪ, ಈಡಿಗ ಸಂಘದ ರಾಜ್ಯಪ್ರತಿನಿಧಿ ರವಿ, ಹೊನ್ನಪ್ಪ, ಹಿರಿಯ ವಕೀಲ ಎನ್.ಪಿ. ಧರ್ಮರಾಜ್, ರಾಜಪ್ಪ ಮಸಗಾರು, ತೇಕಲೆ ರಾಜಪ್ಪ,ರಘುಪತಿ , ಪ್ರವೀಣ್ ಹಿರೆ ಇಡಗೋಡು ಮತ್ತಿತರರು ಇದ್ದರು.

Ad Widget

Related posts

ಕಾರ್ಮಿಕರು ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ಪಡೆಯಿರಿ

Malenadu Mirror Desk

ಶ್ರದ್ಧಾ ಭಕ್ತಿಯಿಂದ ಮಾಡಿದ ಸೇವೆಯಿಂದ ಇಷ್ಟಾರ್ಥ ಸಿದ್ಧಿ, ಸಿಗಂದೂರು ನವರಾತ್ರಿ ಉತ್ಸವದಲ್ಲಿ ಈಡಿಗ ಮಹಾಸಂಸ್ಥಾನದ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಶ್ರೀಗಳು

Malenadu Mirror Desk

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 15 ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.