Malenadu Mitra
ರಾಜ್ಯ ಶಿವಮೊಗ್ಗ

ಕುವೆಂಪು ವಿವಿ ಸೀಟು ಭರ್ತಿ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಭರ್ತಿಯಾಗದ ಪಿಜಿ ಸೀಟ್‌ಗಳನ್ನು ಆಕಾಂಕ್ಷಿಗಳಿಗೆ ಕೊಡಬೇಕು. ಮತ್ತು ಕುವೆಂಪು ವಿವಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕೆಂದು ಆಗ್ರಹಿಸಿ  ಕುವೆಂಪು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕುವೆಂಪು ವಿಶ್ವವಿದ್ಯಾಲಯದಲ್ಲಿ ೨೦೨೩-೨೪ನೇ ಸಾಲಿನ ಪಿಜಿ ಪ್ರವೇಶ ಮುಕ್ತಾಯಗೊಂಡಿದೆ ಎಂದಿದ್ದಾರೆ. ಓಬಿಸಿ, ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಲವರು ಮೀಸಲಾತಿಯಲ್ಲಿ ಪ್ರವೇಶ ಸಿಗದೇ ವಂಚಿತರಾಗಿದ್ದಾರೆ. ಎಸ್.ಸಿ./ ಎಸ್.ಟಿ., ಹಾಗೂ ಅಂಗವಿಕಲರ  ಕೋಟಾದ ಸೀಟುಗಳಿಗೆ ಪ್ರವೇಶಪಡೆಯಲು ವಿದ್ಯಾರ್ಥಿಗಳೇ ಇಲ್ಲದಿರುವುದರಿಂದ ಅವಕಾಶ ವಂಚಿತರಾಗಿರುವ ಓಬಿಸಿ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕ್ಸೌಲಿಂಗ್ ನಡೆಸಿ, ಈ ಸೀಟುಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ ಇದ್ದು, ವಿಶ್ವವಿದ್ಯಾಲಯದ ಆಡಳಿತ ಪಿಜಿ ಸೀಟ್‌ಗಳನ್ನು ಭರ್ತಿ ಮಾಡಲು ಆಗ್ರಹ ಮಂಡಳಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬತಿ ಅನುಸರಿಸಲಾಗುತ್ತಿದೆ ಎಂದರು.


ಪ್ರತಿ ವರ್ಷ ಕಾಲೇಜುಗಳು ಆರಂಭವಾಗುವ ಮೊದಲೇ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು. ಆದರೆ, ಈ ಬಾರಿ ತರಗತಿಗಳು ಆರಂಭವಾಗಿ ಸೆಮಿಸ್ಟರ್ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡಿಲ್ಲ. ಈ ಬಗ್ಗೆ ಎನ್.ಎಸ್.ಯು.ಐ. ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಲವಾರು ಬಾರಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ, ಕುಲಸಚಿವರಿಗೆ ಮನವಿ ಮಾಡಿದ್ದಾರೆ. ಆದರೆ, ಇದುವರೆಗೂ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸದೇ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದರು.

ತರಗತಿಗಳು ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದ್ದು, ಗದಿತ ಪಠ್ಯಕ್ರಮಗಳ ಬೋಧನೆ ನಡೆದಿಲ್ಲ. ಸೆಮಿಸ್ಟರ್ ಪರೀಕ್ಷೆ ಹತ್ತಿರವಾಗುತ್ತಿದ್ದು, ಪಾಠವನ್ನೇ ಕೇಳದೆ ಪರೀಕ್ಷೆ ಬರೆಯುವುದು ಹೇಗೆಂಬ ಅತಂಕ ವಿದ್ಯಾರ್ಥಿಗಳಲ್ಲಿ ಮನೆಮಾಡಿದೆ. ಆದ್ದರಿಂದ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ನಿಗಧಿತ ಪಠ್ಯಕ್ರಮ ಗಳನ್ನು ಮುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಜಯ ಕುಮಾರ್ ಎಸ್.ಎನ್., ಹರ್ಷಿತ್, ಮುರಗೇಶ್, ಖಿಲ್, ಕೀರ್ತಿ ಇದ್ದರು.

Ad Widget

Related posts

ಈಡಿಗ ಸಮುದಾಯದ ಹಕ್ಕೊತ್ತಾಯ ಸಮಾವೇಶ
ನ್ಯಾಯಯುತ ಬೇಡಿಕೆ ಮುಂದಿಟ್ಟುಕೊಂಡು ಈಡಿಗರ ಶಕ್ತಿಪ್ರದರ್ಶನ

Malenadu Mirror Desk

ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ಪುನಶ್ಚೇತನ : ಬಿ.ವೈ.ರಾಘವೇಂದ್ರ

Malenadu Mirror Desk

ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ವಿದ್ಯಾರ್ಥಿ ಸ್ಥಳದಲ್ಲೇ ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.