Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಅಲ್ಲಮಪ್ರಭು ನಾಮಕರಣ, ಸಂಪುಟ ನಿರ್ಣಯ, ಸಿಎಂ ಡಿಸಿಎಂ ಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

ಬೆಂಗಳೂರು, ಜ,18 -ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ
ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ಮೂಲಕ ಜಿಲ್ಲೆಯ ಜನತೆಯ ದಶಕಗಳ ಕನಸನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನನಸು ಮಾಡಿದೆ,” ಮಧು ಬಂಗಾರಪ್ಪ ಎಂದು ಹೇಳಿದ್ದಾರೆ.

“12ನೇ ಶತಮಾನದಲ್ಲಿಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್​​ಗೆ ಇಡಬೇಕು ಎಂಬುದು ಜನತೆಯ ಒತ್ತಾಸೆಯಾಗಿತ್ತು. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವುದು ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪಡೆದುಕೊಳ್ಳುತ್ತದೆ ಎಂಬುದಕ್ಕೆ ಇದು ನಿದರ್ಶನ,” ಎಂದು ಬಣ್ಣಿಸಿದ್ದಾರೆ.

ಸರ್ಕಾರದ ನಿರ್ಧಾರ ಅತ್ಯಂತ ಸಮಯೋಚಿತವಾಗಿದೆ ಎಂದು
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.

ಜನವರಿ,12 ರಂದು ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾಕ್೯ನಲ್ಲಿ ನಡೆದ ಯುವನಿಧಿ ಕಾರ್ಯಕ್ರಮದ ವೇಳೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವಂತೆ ವೇದಿಕೆಯಲ್ಲಿದ್ದ ಸಿ.ಎಂ ಹಾಗೂ ಡಿಸಿಎಂ ಅವರಿಗೆ ಮಧು ಬಂಗಾರಪ್ಪ ಮನವಿ ಮಾಡಿದ್ದರು.

“ಜ.12 ರಂದು ಇದೇ ಪಾರ್ಕ್‌ನಲ್ಲಿ ಆಯೋಜಿಸಿದ್ದ ಯುವನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಘೋಷಿಸಿದ್ದರು. ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರಿಗೂ ಅಭಿನಂದನೆ‌ ಸಲ್ಲಿಸುತ್ತೇನೆ,” ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಆಯನೂರು ಅಭಿನಂದನೆ

ಸಂಪುಟ ಸಭೆಯಲ್ಲಿ ಫ್ರೀಡಂ ಪಾರ್ಕಿಗೆ ಅಲ್ಲಮ ಪ್ರಭು ಹೆಸರಿಡಲು ತೀರ್ಮಾನ‌ಮಾಡಿರುವ ಸರ್ಕಾರದ ಕ್ರಮಕ್ಕೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂ ಮಾಡಿರುವ ನಿರ್ಧಾರದ ಹಿಂದೆ ಸಚಿವ ಮಧುಬಂಗಾರಪ್ಪ ಅವರ ಶ್ರಮವಿದೆ. ಈ ಕಾರಣಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

EOM

Ad Widget

Related posts

ಸಿಗಂದೂರು ಚೌಡಮ್ಮ ದೇವಿ ಜಾತ್ರೆ ಆರಂಭ, ಭಕ್ತಿಪರವಶರಾದ ಭಕ್ತರು
ಹರಿದು ಬಂದ ಭಕ್ತಸಾಗರ, ಜನಮನಗೆದ್ದ ಜಾನಪದ ಕಲಾತಂಡಗಳು

Malenadu Mirror Desk

ಶಿವಮೊಗ್ಗದಲ್ಲಿ ಮತ್ತೆ ಕೋವಿಡ್ ದ್ವಿಶತಕ, ಸಾಗರದಲ್ಲಿ ಎಷ್ಟು ಸೋಂಕು ಗೊತ್ತಾ ?

Malenadu Mirror Desk

ಕಾರ್ಮಿಕರು ಇ.ಎಸ್.ಐ. ಆಸ್ಪತ್ರೆಯ ಪ್ರಯೋಜನ ಪಡೆಯಿರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.