ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್ (35) ಬಂಧಿತರು.
ಆರೋಪಿತರಿಂದ 1.40 ಲಕ್ಷ ರೂ ಮೌಲ್ಯದ 4 ಕೆಜಿ 461 ಗ್ರಾಂ ತೂಕದ ಒಣ ಗಾಂಜಾ ಮತ್ತು ಅಂದಾಜು 3 ಸಾವಿರ ರೂ. ಮೌಲ್ಯದ ಮೊಬೈಲ್ ಹಾಗೂ ಸುಮಾರು 70 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಸೇರಿ ಒಟ್ಟು 2.13 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
previous post