Malenadu Mitra
ರಾಜ್ಯಶಿವಮೊಗ್ಗ

ಫೆಂಗಲ್ ಎಫೆಕ್ಟ್ : ಜಿಲ್ಲೆಯಾದ್ಯಂತ ಶಾಲಾ- ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಡಿಸೆಂಬರ್ 3 ) ರಜೆ ಘೋಷಿಸಿ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಶಿವಮೊಗ್ಗ ಜಿ.ಪಂ ಸಿಇಓ ಹೇಮಂತ್. ಎನ್ ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮವಾಗಿ
ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಮೋಡ ಕವಿದ ವಾತವರಣದ ಜೊತೆ ನಿನ್ನೆ ಸಂಜೆ ಜಿಲ್ಲೆಯ ಕೆಲವೆಡೆ ಮಳೆ ಕೂಡ ಸುರಿದಿತ್ತು.

ಮುಂದುವರಿದು ಡಿ.3 ಮತ್ತು 4ರಂದು ಆರೆಂಜ್‌ ಮತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ವಹಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Related posts

ಮಾದಕ ವ್ಯಸನಿ ಮಗ: ತಂದೆ-ತಾಯಿ ಆತ್ಮಹತ್ಯೆ

Malenadu Mirror Desk

ಭಾವುಕ ಲೋಕ ಸೃಷ್ಟಿಮಾಡಿದ್ದ ಗುರುವಂದನೆ, ಶಿಷ್ಯವೃಂದದ ಗೌರವ ಸ್ವೀಕರಿಸಿ ಪುನೀತರಾದ ಗುರುಗಳು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಂದ ಹೃದಯ ಸ್ಪರ್ಶಿ ಕಾರ್ಯಕ್ರಮ

Malenadu Mirror Desk

ರಾಜ್ಯದ ಎಲ್ಲಾ ಕ್ವಾರಿಗಳ ಸರ್ವೇಗೆ ಹೈಕೋರ್ಟ್ ಸೂಚನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.