ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನೆತ್ತರು ಹರಿದಿದ್ದು, ಗಂಡನೇ ಹೆಂಡತಿಯನ್ನ ಭೀಕರವಾಗಿ ಕೊಲೆ ಮಾಡಿದ್ದಾನೆ.
ಶಿಕಾರಿಪುರ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ರೇಣುಕಾ(40) ಕೊಲೆಯಾದ ಮಹಿಳೆ.
ಪತಿ ನಾಗರಾಜ್(45) ಪತ್ನಿ ರೇಣುಕಾನನ್ನು ಕೊಲೆ ಮಾಡಿದ್ದು, ಶಿಕಾರಿಪುರ ಪೊಲೀಸರು ಆತನನ್ನ ವಶಕ್ಕೆ ಪಡೆದಿದ್ದಾರೆ.
ಕೌಟುಂಬಿಕ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದ್ದು, ಶಿಕಾರಿಪುರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಶಿಕಾರಿಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
next post