ಶಿವಮೊಗ್ಗ: ನಟ ಹಾಗೂ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಇಂದು ಶಸ್ತ್ರಚಿಕಿತ್ಸೆಯಿದ್ದು, ಶೀಘ್ರ ಗುಣಮುಖರಾಗಲಿ ಎಂದು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಬೆಳಿಗ್ಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೇರಿಕಾಕ್ಕೆ ತೆರಳಿದ್ದು, ಇಂದು ಚಿಕಿತ್ಸೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ಪೂಜೆ ಸಲ್ಲಿಸಿದ್ದು, ಬೇಗನೆ ಗುಣಮುಖರಾಗಿ ಕರುನಾಡಿಗೆ ಮರಳಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಬಸವರಾಜ್, ಮಂಜುನಾಥ್ ಸೇರಿದಂತೆ ಪ್ರಮುಖರಿದ್ದರು.