Malenadu Mitra
ಜಿಲ್ಲೆ ಹೊಸನಗರ

ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಟಿಟಿ ಢಿಕ್ಕಿ- ಹಲವರಿಗೆ ಗಾಯ

ಶಿವಮೊಗ್ಗ:ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.
ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ.


ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಎಲ್ಲರೂ ಕೇರಳದಿಂದ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Related posts

ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ಬಂಧನಕ್ಕೆ ಎಸ್ ಡಿಪಿಐ ಆಗ್ರಹ

Malenadu Mirror Desk

ಅಜ್ಜವ್ವ ಏಟ್ ದಿನಾತು ನಿನ್ನೋಡಿ…

Malenadu Mirror Desk

ಸೊನಲೆಯಲ್ಲಿ ಅಮ್ಮನ ಹಬ್ಬದ ಸಂಭ್ರಮ, 25 ವರ್ಷ ಬಳಿಕ ಸ್ವಾಮಿರಾವ್ ಮನೆಯಲ್ಲಿ ಮನೆದೇವತೆ ಆರಾಧನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.