ಶಿವಮೊಗ್ಗ :ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು, ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯ ಧನುಶ್ರೀ(20) ಮೃತ ವಿದ್ಯಾರ್ಥಿನಿ.
ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ಧನುಶ್ರೀ ಅವರ ತಾಯಿ ಬೈದು, ಓದುವಂತೆ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದಿದ್ದ ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೇ ಆಕೆಯನ್ನು ಆಯನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಡಿ.23 ರ ಸೋಮವಾರ ವಿಷ ಸೇವಿಸಿದ್ದ ಧನುಶ್ರೀ, ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.