Malenadu Mitra
ಹೊಸನಗರ

ಮನೆಯಲ್ಲಿರದ ವೇಳೆ ಕಳ್ಳರ ಕೈಚಳಕ: 9 ಲಕ್ಷ ರೂ. ಮೌಲ್ಯದ ಒಡವೆ ಕಳವು

ಹೊಸನಗರ: ಮನೆಯಲ್ಲಿ ಯಾರು ಇಲ್ಲದ್ದನ್ನ ಗಮನಿಸಿ, ಒಡವೆಗಳನ್ನು ದೋಚಿರುವ ಘಟನೆ ಹೊಸನಗರದಲ್ಲಿ ನಡೆದಿದೆ.
ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ಕಳ್ಳತನ ನಡೆದಿದ್ದು, 9 ಲಕ್ಷ ರೂ. ಮೌಲ್ಯದ ಒಡವೆ ಕಳವು ಮಾಡಲಾಗಿದೆ.
ಗೊರಗೋಡು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರತಿಭಾ ಕೃಷ್ಣೋಜಿರಾವ್ ಎಂಬುವರು ತಮ್ಮ ಮಗಳೊಂದಿಗೆ ತಮ್ಮ ಸಂಬಂಧಿಯ ಶುಭಕಾರ್ಯದ ನಿಮಿತ್ತ ಹೈದರಾಬಾದ್ ಗೆ ತೆರಳಿದ್ದರು. ಡಿ.25 ರಂದು ಮನೆಗೆ ಮರಳಿದಾಗ ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಪರಿಶೀಲಿಸಿದಾಗ ಮನೆಯ ಹೆಂಚುಗಳನ್ನು ತೆಗೆದು ಒಳ ನುಗ್ಗಿರುವ ಕಳ್ಳರು, ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ. ಕಳವಾದ ವಸ್ತುಗಳ ಒಟ್ಟು ಮೌಲ್ಯ 9.20 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಮನೆ ಬಾಗಿಲಲ್ಲೇ ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Malenadu Mirror Desk

ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Malenadu Mirror Desk

ರಿಪ್ಪನ್‌ಪೇಟೆಯಲ್ಲಿ ಕೊರೊನಾ ಆರೈಕೆ ಕೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.