Malenadu Mitra
ಜಿಲ್ಲೆಶಿವಮೊಗ್ಗ

ಶ್ರೀರಾಮಪುರದಲ್ಲಿ ನವಜಾತ ಗಂಡು ಶಿಶು ಪತ್ತೆ

ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿರುವ ಘಟನೆ ನಗರದ ಶ್ರೀರಾಮಪುರದಲ್ಲಿ ನಡೆದಿದೆ.
ಕಳೆದ ರಾತ್ರಿ ಹೆರಿಗೆಯಾಗಿರುವ ಸಾಧ್ಯತೆಯಿದ್ದು, ಹೆರಿಗೆಯಾದ ಬಳಿಕ ತಾಯಿ ಮಗುವನ್ನು ಕೈ ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾರೆ.
ನಗರದ ಶ್ರೀರಾಮಪುರದ 2ನೇ ಕ್ರಾಸ್ ನಲ್ಲಿ ಬೋರೆವಲ್ ಬಳಿ ಚೀಲದಲ್ಲಿ ಗಂಡು ಶಿಶುವನ್ನ ಬಿಟ್ಟು ಹೋಗಿದ್ದು, ಇಂದು ಬೆಳಿಗ್ಗೆ ಸ್ಥಳೀಯರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯವರು ಬರುವ ಮೊದಲೇ ಸ್ಥಳೀಯರು ಮಗುವನ್ನು ರಕ್ಷಿಸಿ ಸ್ನಾನ ಮಾಡಿಸಿ, ಆರೈಕೆ ಮಾಡಿದ್ದಾರೆ.
ಸದ್ಯ ಮಗುವನ್ನು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಾಭಾಯಿ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.
ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Related posts

ರಾಜ್ಯಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Malenadu Mirror Desk

ರಂಗಶಿಲ್ಪಗಳ ಲೋಕಾರ್ಪಣೆ

Malenadu Mirror Desk

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.