Malenadu Mitra
ಜಿಲ್ಲೆಶಿವಮೊಗ್ಗ

ಬಸ್ – ಬೈಕ್ ನಡುವೆ ಢಿಕ್ಕಿ: ಗಂಭೀರ ಗಾಯಗೊಂಡ ಬಾಲಕಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಸ್ಕೂಟಿ ಢಿಕ್ಕಿಯಾಗಿ ಬಾಲಕಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ.
ಶಿವಮೊಗ್ಗದ ಎನ್.ಟಿ ರಸ್ತೆಯ ಮಂಡ್ಲಿ ಪಂಪ್ ಹೌಸ್ ಬಳಿ ಅಪಘಾತ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಂಧಿಚಟ್ನಹಳ್ಳಿಯ ಪೃಥ್ವಿ (15)ಗಾಯಗೊಂಡ ಬಾಲಕಿ.
ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾಗಿದ್ದು, ಈ ವೇಳೆ ಕೆಳಗೆ ಬಿದ್ದಿರುವ ಪೃಥ್ವಿ ಕಾಲಿಗೆ ಗಂಭೀರ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಅಪಘಾತದ ರಭಸಕ್ಕೆ ಸ್ಕೂಟಿ ಹೋಗಿ ಡ್ರೈನ್ ನಿರ್ಮಾಣಕ್ಕೆ ತೆಗೆದಿದ್ದ ಗುಂಡಿಯಲ್ಲಿ ಬಿದ್ದಿದೆ.
ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Related posts

ಅದ್ದೂರಿ ಮೆರವಣಿಗೆ, ಹಲವರ ನಾಮಪತ್ರ
ನಮ್ಮದೇ ಗೆಲುವು ಎಂದ ಅಭ್ಯರ್ಥಿಗಳು

Malenadu Mirror Desk

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು, ಸಚಿವ ಸಂಪುಟ ಅನುಮೋದಿಸಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

Malenadu Mirror Desk

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು: ಸರ್ಕಾರದ ಕ್ರಮವನ್ನ ಪ್ರಶ್ನಿಸಿದ ಡಾ.ಸರ್ಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.