Malenadu Mitra
ಶಿವಮೊಗ್ಗಹೊಸನಗರ

ಶಿವಮೊಗ್ಗದಲ್ಲಿ ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ವಿಚಾರ ಹೆಚ್ಚು ಚರ್ಚೆಯಲ್ಲಿರುವುದರ ನಡುವೆಯೇ ಶಿವಮೊಗ್ಗದಲ್ಲಿ ಗರ್ಭಿಣಿ ಸಾವನ್ನಪ್ಪಿದ್ದಾಳೆ.
ಹೊಸನಗರದ ದುಬಾರತಟ್ಟೆಯ ಅಶ್ವಿನಿ(29) ಮೃತ ಮಹಿಳೆ.
ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟೆಯ ನಿವಾಸಿ ಅಶ್ವಿನಿ, ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದು, ರಕ್ತಸ್ರಾವದ ಹಿನ್ನೆಲೆಯಲ್ಲಿ ಸಾಗರದ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಗೆ ಜ.26 ರಂದು ದಾಖಲಾಗಿದ್ದರು. ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ನಿನ್ನೆ ಶಿಫ್ಟ್ ಮಾಡುವ ವೇಳೆಯೇ ಅಶ್ವಿನಿ ಸಾವನ್ನಪಿದ್ದಾಳೆ.
ವೈದ್ಯರ ನಿರ್ಲಕ್ಷ್ಯವೇ ಅಶ್ವಿನಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ಈ ಆರೋಪ ಅಲ್ಲಗಳೆದಿರುವ ಡಿಹೆಚ್ಓ ಡಾ.ನಟರಾಜ್, ಚಿಕಿತ್ಸೆ ನೀಡುವಾಗ ಅಶ್ವಿನಿ ಆರೋಗ್ಯವಾಗಿಯೇ ಇದ್ದರು. ನಂತರ ಹೃದಯಘಾತದಿಂದ ಮೃತಪಟ್ಟಿರುವ ಸಾಧ್ಯತೆಯಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Ad Widget

Related posts

ಸಿಗಂದೂರಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ,ವಿಖ್ಯಾತಾನಂದ ಸ್ವಾಮೀಜಿ ಹಾಗೂ ಯೋಗೇಂದ್ರ ಶ್ರೀ ಭಾಗಿ

Malenadu Mirror Desk

ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾರ್ವಜನಿಕರ ಸಲಹೆ ಅಗತ್ಯ: ಶಾಸಕ ಚನ್ನಬಸಪ್ಪ

Malenadu Mirror Desk

ಕುವೆಂಪು ವಿವಿ ದೇಶದ 56ನೇ ಶ್ರೇಷ್ಠ ಸಂಶೋಧನಾ ಸಂಸ್ಥೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.