Malenadu Mitra
ರಾಜ್ಯಶಿವಮೊಗ್ಗಹೊಸನಗರ

ಜೇನುಕಲ್ಲಮ್ಮ ದೇವಿಗೆ ಹರಕೆ ಸಲ್ಲಿಸಿದ ಭಕ್ತರುಅಮ್ಮನಘಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವ ಮಂಗಳವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಜಾತ್ರೆಯ ಅಂಗವಾಗಿ ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ಹಾಗೂ ಪುರೋಹಿತರ ನೇತೃತ್ವದಲ್ಲಿ ದೇವಿಗೆ ವಿವಿಧ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಿಯ ದರ್ಶನ ಪಡೆಯಲು ಬೆಳಗ್ಗಿನಿಂದಲೇ ಭಕ್ತರುಸಾಲುಗಟ್ಟಿ ನಿಂತಿದ್ದರು.

ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆಗಳಿಂದ ಹಾಗೂ ಹೊರ ಜಿಲ್ಲೆಗಳಿಂದಲೂ ಭಕ್ತರು ತಂಡೋಪತಂಡವಾಗಿ ಅಮ್ಮನಘಟ್ಟಕ್ಕೆ ಆಗಮಿಸಿದರು. ದೇವಿಯ ಮೇಲಿನ ಅಪಾರ ನಂಬಿಕೆಯಿಂದ ಭಕ್ತರು ಹಣ್ಣು-ಕಾಯಿ ಸಮರ್ಪಿಸಿ ಹರಕೆ ತೀರಿಸಿದರು. ಮುತ್ತೈದೆಯರು ವಿಶೇಷವಾಗಿ ಉಡಿ ತುಂಬುವ ಸೇವೆ ಸಲ್ಲಿಸಿ ಪ್ರಾರ್ಥಿಸಿದರು. ಮಲೆನಾಡಿನ ಶ್ರಮಿಕ ವರ್ಗಗಳು ಮನೆದೇವತೆಯಿಂದ ಆರಾಧಿಸುವ ಈ ದೇವಳದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಅತೀ ವಿಜೃಂಭಣೆಯಿಂದ ನಡೆಯಲಿದೆ. ಪ್ರತಿ ವರ್ಷ ನಡೆಯುವ ಜೇನುಕಲ್ಲಮ್ಮ ದೇವಿಯ ಜಾತ್ರೆಯು ಈ ಭಾಗದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ. ಪ್ರತಿ ವರ್ಷ ದವಸ ಧಾನ್ಯ ಸಮರ್ಪಿಸುವ ಈ ಜಾತ್ರೆಯ ಮೇಲೂ ಈ ಬಾರಿಯ ಬರಗಾಲದ ಛಾಯೆ ಕಂಡುಬಂತು.
ಶ್ರೀ ಕ್ಷೇತ್ರ ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ  ಶ್ರೀ ಯೋಗೇಂದ್ರ ಅವದೂತರು ಮತ್ತು ಶ್ರೀ ಕ್ಷೇತ್ರ ಸಿಗಂದೂರು ಧರ್ಮದರ್ಶಿಗಳಾದ ರಾಮಪ್ಪ ಅವರು ಭೇಟಿ ನೀಡಿ ದೇವಿ ದರ್ಶನ ಪಡೆದರು ಇದೇ ಸಂದರ್ಭ ದೇವಾಸ್ಥಾನ ಸಮಿತಿಯಿಂದ ಅವರನ್ನು ಗೌರವಿಸಲಾಯಿತು. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.  ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಲಗೋಡು ರತ್ನಾಕರ್, ಕಾರ್ಯದರ್ಶಿ ಗುರುರಾಜ ಭಟ್ ಸೇರಿದಂತೆ ವ್ಯವಸ್ಥಾಪನಾ ಸಮಿತಿ ಹಾಗೂ ಜಾತ್ರಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

Ad Widget

Related posts

ಕೊಡಕಣಿ ಗ್ರಾಮಸ್ಥರಿಂದ ಅಳಿಯ ಹಾಗೂ ಸಚಿವ ಸುನೀಲ್ ಕುಮಾರ್ ಅವರಿಗೆ ಸನ್ಮಾನ

Malenadu Mirror Desk

ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ

Malenadu Mirror Desk

ಕಾಂಗ್ರೆಸ್‌ನತ್ತ ಆಯನೂರು ಮಂಜುನಾಥ್ ?, ಈಶ್ವರಪ್ಪ ಎದುರು ಸ್ಪರ್ಧೆ

Malenadu Mirror Desk
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.