ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮಹಿಳಾ ಅಧಿಕಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ವೀರಭದ್ರಪ್ಪಪೂಜಾರಿ ಅವರು ನಿಂಧಿಸಿದ್ದಾರೆ ಎಂದು ಆರೋಪಿಸಿ ಮಂಗಳವಾರ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿ ಮುಂದೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ಕಚೇರಿಗೆ ಬಂದಿದ್ದ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರೂ ಆದ ಸದಸ್ಯರು, ಮಹಿಳಾ ಅಧಿಕಾರಿಗೆ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಜಿಲ್ಲಾ ಪಂಚಾಯಿತಿ ಸದಸ್ಯರು ಮಹಿಳಾ ಅಧಿಕಾರಿಯ ಕ್ಷಮೆ ಕೇಳಬೇಕು. ಸರಕಾರ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯರ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡಲು ನಿರ್ಧರಿಸಲಾಗಿದೆ.
previous post
next post