ಶಿವಮೊಗ್ಗನಗರವು ಆಟೊಮೊಬೈಲ್ ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದು, ಇಲ್ಲಿನ ಮೂಲಭೂತ ಸೌಕರ್ಯ ಹಾಗೂ ಕೈಗಾರಿಕೆಗಳ ಬೆಳವಣಿಗೆಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತಿಸಲಾಗುವುದು ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ ಹೇಳಿದರು.
ಅವರು ಶಿವಮೊಗ್ಗದ ಕೈಗಾರಿಕಾ ವಸಾಹತು ಕೈಗಾರಿಕೋದ್ಯಮಿಗಳ ಸಂಘದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇದೇ ಕಾರ್ಯಕ್ರಮದಲ್ಲಿ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಅವರನ್ನು ಸನ್ಮಾನಿಸಲಾಯಿತು.
ಉದ್ಯಮಿಗಳಾದ ನಂಜುAಡಶೆಟ್ಟಿ, ಉಮೇಶ್, ಸುಬ್ರಹ್ಮಣ್ಯ , ವಸಂತ ದಿವೇಕರ್, ನಾಗೇಶ್ ಮತ್ತಿತರರಿದ್ದರು.
previous post
next post