ಶಿವಮೊಗ್ಗ ನಗರದ ಶಾಲೆಗಳಲ್ಲಿ ಯೋಗ ಶಿಕ್ಷಣ ಅಳವಡಿಕೆಗೆ ಬೇಕಾದ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಮತ್ತು ಅನಿದಾನಿತ ಶಾಲೆಗಳಲ್ಲಿ ಯೋಗ ಶಿಕ್ಷಣ ಅಳವಡಿಸಬೇಕು. ಇದಕ್ಕೆ ಬೇಕಾದ ಶಿಕ್ಷಕರು ಮತ್ತು ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿ ಎಂದು ಸೂಚಿಸಿದರು.
ಇದೇ ವೇಳೆ ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಕೂಡಲೇ ಕ್ರಮಕೈಗೊಳ್ಳಬೇಕು. 2 ಲಕ್ಷ ಒಳಗಿನ ಕಾಮಗಾರಿಗೆ ಸಿಇಒ ಅವರೇ ಅನುಮತಿ ನೀಡಬಹುದು. ಹೆಚ್ಚಿನ ಮೊತ್ತದ ಯೋಜನೆಗೆ ಅನುಮತಿ ಕೊಡಿಸಲಾಗುವುದು ಎಂದು ಸಚಿವರು ಹೇಳಿದರು.
ಒಟ್ಟು 495 ದೈಹಿಕ ಶಿಕ್ಷಕರಿಗೆ ಯೋಗ ಶಿಕ್ಷಣ ತರಬೇತಿ ಆಗಿದೆ. 17 ಮಂದಿಗೆ ತರಬೇತಿ ಆಗಬೇಕಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವೈಶಾಲಿ ಅವರು ಉಪಸ್ಥಿತರಿದ್ದರು.
previous post
next post