ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘಟನೆಯು ಮಂಗಳವಾರ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತು.
ರಾಜ್ಯದ 412 ಕಾಲೇಜುಗಳಲ್ಲಿರುವ ಅತಿಥಿ ಉಪನ್ಯಾಸಕರು ಕೋವಿಡ್ ಅವಧಿಯಲ್ಲಿ ಯಾವುದೇ ವೇತನ ಇಲ್ಲದೆ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ನಮ್ಮ ಸೇವೆ ಮುಂದುವರಿಸಲು ಉನ್ನತ ಶಿಕ್ಷಣ ಸಚಿವರು ನವೆಂಬರ್ ತಿಂಗಳಿನಲ್ಲಿಯೇ ಆದೇಶ ನೀಡಿದ್ದರೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಅದನ್ನು ಅನುಷ್ಠಾನಗೊಳಿಸುತ್ತಿಲ್ಲ ಎಂದು ಸಂಘ ಮನವಿಯಲ್ಲಿ ತಿಳಿಸಿದೆ. ಸೇವೆ ಮುಂದುವರಿಸಬೇಕು ಮತ್ತು ಸೇವಾ ಭದ್ರತೆ ಒದಗಿಸಬೇಕೆಂಬ ಮನವಿಯನ್ನು ಸರಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭ ಸಂಘಟನೆ ರಾಜ್ಯ ಅಧ್ಯಕ್ಷ ಡಾ.ಸೋಮಶೇಖರ್ ಶಿಮೊಗ್ಗಿ,ಪ್ರಧಾನ ಕಾರ್ಯದರ್ಶಿ ಡಾ.ನರಹರಿ ಎಂ.ಸಿ., ಖಜಾಂಚಿ ರಾಜೇಶ್ ಕುಮಾರ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಸರ್ವಜ್ಞಮೂರ್ತಿ, ಹಾಲೇಶಪ್ಪ ,ಶಿವು ಮತ್ತಿತರರು ಭಾಗವಹಿಸಿದ್ದರು.
previous post
next post