ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ಹೊರಬರುತ್ತಿದ್ದಂತೆ ವಿಜಯಶಾಲಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಗೆದ್ದವರು ತಮ್ಮ ಬೆಂಬಲಿಗರೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ತಮ್ಮ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ತಮ್ಮ ಚುನಾವಣಾ ಯಶಸ್ಸಿಗೆ ಬೀಗುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿಯೂ ಒಂದೊಂದಾಗಿ ಫಲಿತಾಂಶ ಹೊರಬರುತ್ತಿದ್ದಂತೆ ಎಣಿಕೆ ಕೇಂದ್ರದ ಹೊರಗೆ ಜೈಕಾರ, ಹಾರತುರಾಯಿಗಳ ಅಬ್ಬರ ಜೋರಾಗಿದೆ.
previous post
next post