ಶಿವಮೊಗ್ಗ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇದೆ ಆದರೆ ಪಕ್ಷ ಸಮ್ಮತಿಸಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅಪೇಕ್ಷೆ ಹೊಂದಿದ್ದಾರೆ. ನನಗೂ ಚುನಾವಣೆಗೆ ಸ್ಪರ್ಧಿಸುವ ಇಚ್ಚೆ ಇದೆ. ಆದರೆ ಪಕ್ಷದ ನಿರ್ಣಯವೇ ಅಂತಿಮ, ಅದಕ್ಕೆ ಯಾವತ್ತೂ ಬದ್ಧವಾಗಿರುತ್ತೇನೆ. ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದರು.
previous post