Malenadu Mitra
ರಾಜಕೀಯರಾಜ್ಯ

ಸದಾನಂದ ಗೌಡ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಅಸ್ವಸ್ಥರಾದ ಕಾರಣ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಬಿಜೆಪಿ ವಿಶೇಷ ಸಭೆಯಲ್ಲಿ ಭಾಗವಹಿಸಿದ್ದ ಅವರು ಲೋಶುಗರ್ ಕಾರಣಕ್ಕೆ ಚಿತ್ರದುರ್ಗದಲ್ಲಿ ಅಸ್ವಸ್ಥರಾದರೆಂದು ಬಲ್ಲ ಮೂಲಗಳು ತಿಳಿಸಿವೆ.
ಸದಾನಂದ ಗೌಡ ಅವರನ್ನು ಜೀರೊ ಟ್ರಾಫಿಕ್‍ನಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಯಿತು.
ಸಚಿವರು ಚೇತರಿಸಿಕೊಂಡಿದ್ದು, ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಸದಾನಂದ ಗೌಡ ಅವರು ಬೆಂಗಳೂರಿನಿಂದ ಚಿತ್ರದುರ್ಗ ಮಾರ್ಗವಾಗಿ ಶಿವಮೊಗ್ಗಕ್ಕೆ ಬಂದು ಸಭೆಯಲ್ಲಿ ಭಾಗವಹಿಸಿದ್ದರು.

Ad Widget

Related posts

ಪ್ರಕಾಶ್ ಎಂಬ ಮಲೆನಾಡಿನ ಸಾರಥಿ ,ಮಲೆನಾಡಿನ ನೂರಾರು ಕುಟುಂಬಗಳಲ್ಲಿ ದೀಪ ಬೆಳಗಿಸಿದ್ದ ಪ್ರಕಾಶ್ ಟ್ರಾವೆಲ್ಸ್

Malenadu Mirror Desk

ಹಾಲು ಉತ್ಪಾದಕರ ಬೆನ್ನಿಗೆ ಶಿಮುಲ್ : ಶ್ರೀಪಾದ ನಿಸರಾಣಿ

Malenadu Mirror Desk

ಕುವೆಂಪು ವಿವಿ ಕುಲಸಚಿವ ಪಾಟೀಲ್ ವರ್ಗಾವಣೆ, ಶ್ರೀಧರ್ ನೂತನ ಕುಲಸಚಿವ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.