Malenadu Mitra
ರಾಜ್ಯ ಸೊರಬ

ಉತ್ತಮ ಆಡಳಿತಕ್ಕಾಗಿ ಗ್ರಾಮೀಣರ ಬೆಂಬಲ

ಪ್ರಧಾನಿ ನರೇಂದ್ರ ಮೋದಿ ಅವರು ಪಂಚಾಯ್ತಿಯಿಂದ ಪಾರ್ಲಿಮೆಂಟ್‌ವರೆಗೆ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದರ ಪರಿಣಾಮ ಪ್ರಸ್ತುತ ರಾಜ್ಯದಲ್ಲಿ ಸುಮಾರು ೩ಸಾವಿರಕ್ಕೂ ಅಧಿಕ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರು ಬಹುಮತ ಸಾಧಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಸೋಮವಾರ ದಿವಾಕರ್ ಭಾವೆ ಫಾರಂ ಹೌಸ್ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಹಮ್ಮಿಕೊಂಡ ಪಕ್ಷದ ಬೆಂಬಲಿತ ನೂತನ ಗ್ರಾಪಂ ಸದಸ್ಯರ ಅಭಿನಂದನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೩೬ ಗ್ರಾಪಂಗಳ ಪೈಕಿ ೨೯ರಲ್ಲಿ ಅಧಿಕಾರ ಹಿಡಿಯುತ್ತೇವೆ. ಚುನಾವಣೆಯಲ್ಲಿ ಸ್ಪರ್ಧಿಸಿದ ೩೮೨ ಅಭ್ಯರ್ಥಿಗಳ ಪೈಕಿ ೨೨೨ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡ ಕೀರ್ತಿ ಪಕ್ಷದ ಕಾರ್ಯಕರ್ತರಿಗೆ ಸಲ್ಲುತ್ತದೆ. ಈ ಬಾರಿಯ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷ ಗಂಭೀರವಾಗಿ ಪರಿಗಣಿಸಿತ್ತು. ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಗ್ರಾಪಂ ಚುನಾವಣೆ ಅಡಿಗಲ್ಲಾಗಿದೆ. ದೇಶದಲ್ಲಿಯೇ ಮಹಿಳಾ ಮೀಸಲಾತಿ ತಂದ ಕೀರ್ತಿ ರಾಜ್ಯಕ್ಕೆ ಸಲ್ಲುತ್ತದೆ ಎಂದರು.
ಶಾಸಕ ಎಸ್. ಕುಮಾರ್ ಬಂಗಾರಪ್ಪ ಮಾತನಾಡಿ ೩೮೬ ಗ್ರಾಮ ಪಂಚಾಯತ್ ಕ್ಷೇತ್ರಗಳಲ್ಲಿ ೨೨೨ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಹಿಂದಿನ ಶಾಸಕರ ದುರಾಡಳಿತ ಹಾಗೂ ಬಗರ್ ಹುಕುಂನಲ್ಲಿ ನಡೆದ  ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಜನರು ಕೊಟ್ಟ ಉತ್ತರವಾಗಿದೆ. ತಾಲ್ಲೂಕಿನಲ್ಲಿ ಅತೀ ಹೆಚ್ಚೆ ಗ್ರಾಮ ಪಂಚಾಯತ್ ಸದಸ್ಯರು ಗೆಲ್ಲಲು ಸೊರಬ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳಲ್ಲದೆ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ರಚಿಸಲಾದ ಸಮಿತಿಯ ಎಲ್ಲಾ ಸದಸ್ಯರ ಒಗ್ಗಟ್ಟಿನ ಶ್ರಮ ಈ ಗೆಲುವಿಗೆ ಕಾರಣವಾಗಿದೆ. ನಾವೆಲ್ಲರು ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊಂದಿದ್ದೇವೆ. ನಮ್ಮಿಂದಲೂ ಲೋಪದೋಷಗಳಾಗಿರಬಹುದು. ಅವುಗಳು ಕಂಡು ಬಂದಲ್ಲಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಬಗೆಹರಿಸಿಕೊಳ್ಳೋಣ ನಮ್ಮ ಗೊಂದಲಗಳು ಕಾರ್ಯಕರ್ತರಿಗೆ ಇರಿಸಿಮುರಿಸು ಮಾಡುತ್ತಿವೆ.  ಗೊಂದಲಗಳನ್ನು ನಿವಾರಿಸಿ ಪಕ್ಷವನ್ನು ಸದೃಢವಾಗಿ ಕಟ್ಟೋಣ ಎಂದರು.  
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗುರುಪ್ರಸನ್ನಗೌಡ ಬಾಸೂರು ಅಧ್ಯಕ್ಷತೆ ವಹಿಸಿದ್ದರು. , ಕೊಟ್ರೇಶ್ ಗೌಡ, ಜಿಲ್ಲಾ ಮಾಜಿ ಅಧ್ಯಕ್ಷ ಎಸ್. ದತ್ತಾತ್ರಿ, ರಾಷ್ಟ್ರೀಯ ಪರಿಷತ್ ಸದಸ್ಯ ಪಾಣಿ ರಾಜಪ್ಪ, ಜಿಪಂ ಸದಸ್ಯ ರಾಜಶೇಖರ ಗಾಳಿಪುರ, ಬಾಲ ಭವನ ರಾಜ್ಯ ನಿರ್ದೇಶಕಿ ಕುಸುಮಾ ಆರ್. ಪಾಟೀಲ್, ಎ.ಎಲ್. ಅರವಿಂದ್, ಎಂ.ಕೆ. ಯೋಗೇಶ್ ವಕೀಲ, ಮಲ್ಲಿಕಾರ್ಜುನ ದ್ವಾರಹಳ್ಳಿ, ಅಶೋಕ್ ನಾಯ್ಕ್, ಲಲಿತಾ ನಾರಾಯಣ, ಗೀತಾ ಮಲ್ಲಿಕಾರ್ಜುನ, ವೀರೇಶ್ ಮೇಸ್ತ್ರಿ, ದೇವೇಂದ್ರಪ್ಪ, ಶಿವಕುಮಾರ್ ಕಡಸೂರು ಇತರರಿದ್ದರು.

Ad Widget

Related posts

ತುಮಕೂರು-ಶಿವಮೊಗ್ಗ ಚತುಷ್ಪಥ ಹೆದ್ದಾರಿ: 6397 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ

Malenadu Mirror Desk

ಮಾಜಿ ಡಿಸಿಎಂ ಈಶ್ವರಪ್ಪಗೆ ಮತ್ತೆ ಸಂಕಷ್ಟ : ಕೋಟೆ ಠಾಣೆಯಲ್ಲಿ ಸುಮೋಟೊ ಕೇಸ್

Malenadu Mirror Desk

ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಫುಡ್ ಕಿಟ್ : ಕೆ.ಎಸ್.ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.