Malenadu Mitra
ಆರೋಗ್ಯ ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಮೊದಲ ಲಸಿಕೆ ಯಾರು ತಗೊಂಡ್ರು ಗೊತ್ತಾ ?

ಶಿವಮೊಗ್ಗ, ಜ.16 ಕೊರೊನ  ಪಿಡುಗಿನ ವಿರುದ್ಧ ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಸಿದ್ಧಪಡಿಸಿರುವ ಲಸಿಕೆ ಅತ್ಯಂತ ಕಡಿಮೆ ದರದ್ದಾಗಿದಾಗಿ ಬಡವರಿಗೂ ಕೈಗೆಟಕುವಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಶನಿವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೇರೆ ದೇಶಗಳ ಲಸಿಕೆಯನ್ನು ಮೈನಸ್ ಡಿಗ್ರಿಯಲ್ಲಿ ಸಂಗ್ರಹಿಸಿಡುವ ಅನಿವಾರ್ಯತೆ ಇದ್ದು, ನಮ್ಮ ದೇಶದಲ್ಲಿ ತಯಾರಿಸಿರುವ ಲಸಿಕೆಯನ್ನು ಸುಲಭವಾಗಿ ದಾಸ್ತಾನು ಮಾಡಬಹುದಾಗಿದೆ. ಕರೋನಾ ವಿರುದ್ಧ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಿ ಯಶಸ್ವಿಯಾಗಿ ಎದುರಿಸಿದ್ದೇವೆ. ಇದೀಗ ಪ್ರತಿಯೊಬ್ಬರಿಗೂ ಲಸಿಕೆಯನ್ನು ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿ ಲಸಿಕೆಯನ್ನು ಸಿದ್ಧಪಡಿಸಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಹೇಳಿದರು.
ಕರೋನಾ ಲಸಿಕೆಯನ್ನು ಉಚಿತವಾಗಿ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಬೇರೆ ದೇಶಗಳ ಮೇಲೆ ಅವಲಂಬಿತಾಗದೆ ನಮ್ಮ ವಿಜ್ಞಾನಿಗಳು ಸ್ವದೇಶಿಯಾಗಿ ಕರೋನಾ ಲಸಿಕೆಯನ್ನು ಸಿದ್ಧಪಡಿಸಿರುವುದು ಎಲ್ಲರಿಗೂ ಹೆಮ್ಮೆ ಮೂಡಿಸಿದೆ. ಮೊದಲ ಹಂತದಲ್ಲಿ ಕರೋನಾ ವಾರಿಯರ್ಸ್‍ಗಳಿಗೆ ಲಸಿಕೆಯನ್ನು ಹಾಕಲಾಗುತ್ತಿದ್ದು, ಸುಮಾರು 3ಕೋಟಿ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ನಮ್ಮ ಜಿಲ್ಲೆಯಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಸುಮಾರು 25ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಿದರು.
ಮುಂದಿನ ಹಂತದಲ್ಲಿ ಪ್ರತಿಯೊಬ್ಬರಿಗೂ ಲಸಿಕೆಯನ್ನು ಹಾಕುವ ಗುರಿಯನ್ನು ಹೊಂದಲಾಗಿದ್ದು, ಕರೋನಾ ವಿರುದ್ಧ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಲಸಿಕೆ ಬಂದಿದೆ ಎಂದು ನಿರ್ಲಕ್ಷ್ಯ ತಾಳದೆ ಕೊರೋನಾ ವಿರುದ್ಧ ಹೋರಾಟ ಮುಂದುವರೆಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧಾರಣೆಯನ್ನು ಕಡ್ಡಾಯವಾಗಿ ಮುಂದುವರೆಸಬೇಕು ಎಂದು ಅವರು ಮನವಿ ಮಾಡಿದರು.ಡಿ ದರ್ಜೆ ನೌಕರರಾದ ಗಾಯತ್ರಿ ಅವರಿಗೆ ಮೊದಲ ಲಸಿಕೆ ನೀಡಲಾಯಿತು. ಮೆಗ್ಗಾನ್ ಅಧೀಕ್ಷಕ ಡಾ..ಶ್ರೀಧರ್ ಸೇರಿದಂತೆ ನೂರು ಮಂದಿ ಕೊರೊನ ವಾರಿಯರ್ಸ್ ಗೆ ಕೊರೊನ ಲಸಿಕೆ ನೀಡಲಾಯಿತು
ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಅಶೋಕ ನಾಯ್ಕ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಮೆಗ್ಗಾನ್ ನಿರ್ದೇಶಕ ಡಾ.ಸಿದ್ಧಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಮೆಗ್ಗಾನ್ ನಿರ್ದೇಶಕರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Ad Widget

Related posts

ನಾನು ಮಾಡಿರುವ ಕನ್ನಡದ ಕೆಲಸಕ್ಕಾಗಿ ಗೆಲ್ಲಿಸಿ

Malenadu Mirror Desk

ಸಾಂಕ್ರಾಮಿಕ ರೋಗ ನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು : ಡಿಡಿಪಿಐ

Malenadu Mirror Desk

ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಕೈ ಬಿಡಬೇಕು: ಬಿಜೆಪಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.