Malenadu Mitra
ರಾಜ್ಯ ಶಿವಮೊಗ್ಗ

ಮಲೆನಾಡಿಗೆ ಮತ್ತೊಂದು ಕೇಂದ್ರೀಯ ವಿದ್ಯಾಲಯ

ಶಿವಮೊಗ್ಗದಲ್ಲಿ ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ನಗರಕ್ಕೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ಮನವಿಯನ್ನು ಮಾಡಲಾಗಿತ್ತು. ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಹೊಸ ಕೇಂದ್ರೀಯ ವಿದ್ಯಾಲಯ ಆರಂಭಿಸುವ ಕುರಿತು ಪರಿಶೀಲನೆಗಾಗಿ ಹಿರಿಯ ಅಧಿಕಾರಿಗಳು ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿದ್ಯಾಲಯ ಕಾರ್ಯಾರಂಭ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿದೆ. ತಾತ್ಕಾಲಿಕವಾಗಿ ನಗರದ ರಾಗಿಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತರಗತಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ತ್ಯಾವರೆ ಚಟ್ನಳ್ಳಿಯಲ್ಲಿ 5ಎಕ್ರೆ ಸ್ಥಳವನ್ನು ಗುರುತಿಸಲಾಗಿದ್ದು, ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಮುಂದಿನ ವರ್ಷದಿಂದ ಇಲ್ಲಿ ವಿದ್ಯಾಲಯ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಡಿಆರ್‍ಡಿಒ ಲ್ಯಾಬ್ ಆರಂಭಿಸುವ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ, ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಘೋಷಣೆಯನ್ನು ಮಾಡಿದ್ದಾರೆ ಎಂದು ಹೇಳಿದರು.

Ad Widget

Related posts

ಶಿವಮೊಗ್ಗ ಒನ್ ಸ್ವಚ್ಛತೆಗೆ ಕಾಂಗ್ರೆಸ್ ಆಗ್ರಹ

Malenadu Mirror Desk

ಮಧುಗೆಲ್ಲಿಸಿ ಸೊರಬಕ್ಕೆ ಬಂದು ಕುಣಿದು ಕುಪ್ಪಳಿಸುವೆ, ಆನವಟ್ಟಿ ರೋಡ್‌ಶೋನಲ್ಲಿ ಶಿವರಾಜ್ ಕುಮಾರ್ ಮನವಿ

Malenadu Mirror Desk

ಸಂಪದ್ಭರಿತ ದೇಶ ಕಟ್ಟಲು ಪಣ ತೊಡೋಣ: ಶಂಕರಮೂರ್ತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.