ರಾಜ್ಯದಲ್ಲಿ ಸೋಮವಾರದಿಂದಲೇ ಘೋ ಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಡುಪಿಯಲ್ಲಿ ಗೋಪೂಜೆ ನೆರವೇರಿಸಿದ ಬಳಿಕ ಕಾನೂನು ಜಾರಿಯಾಗಿರುವುದನ್ನು ಘೋಷಣೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು, ರಾಜ್ಯದಲ್ಲಿ ಇನ್ನು ಮುಂದೆ ಯಾವ ಕಾರಣಕ್ಕೂ ಗೋ ಹತ್ಯೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಗೋ ಹತ್ಯೆ ನಿಷೇಧ ವಿಧೇಯಕವನ್ನು ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ವಿರೋಧದ ನಡುವೆಯೂ ಈ ಕಾಯ್ದೆಯನ್ನು ಸರಕಾರ ಜಾರಿಗೆ ತಂದಿದೆ. ಸೋಮವಾರ ಉಡುಪಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಎಂ ಯಡಿಯೂರಪ್ಪ ಅವರು ಗೋ ಪೂಜೆ ನೆರವೇರಿಸಿ ಸರಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಎಂದು ಘೋಷಿಸಿದ್ದಾರೆ.
previous post
next post