ಕಾರವಾರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಕೇಂದ್ರ ಚುನಾವಣಾ ಆಯೋಗ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಚುನಾವಣೆ ಕರ್ತವ್ಯದಲ್ಲಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಮಾದರಿ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಸಾಗರ ತಾಲೂಕು ಮಂಡಗಳಲೆಯವರಾದ ಕೃಷ್ಣಮೂರ್ತಿ ಅವರು ಶಿವಮೊಗ್ಗ ಹಾಗೂ ಪುತ್ತೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಪ್ರೀತಿಗಳಿಸಿದ್ದರು. ಪ್ರಸ್ತುತ ಅವರು ಕಾರವಾರ ಎಡಿಸಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ
previous post
next post