ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಯನ್ನು ಫೆ. ೮ ಮತ್ತು ೯ ರಂದು ನಗರದ ನೆಹರೂ ಕ್ರೀಡಾಂಗಣ, ನೌಕರರ ಸಂಘದ ಸಭಾಂಗಣ ಹಾಗೂ ಕುವೆಂಪು ರಂಗ ಮಂದಿರದ ಸಮಾನಾಂತರ ವೇದಿಕೆಗಳಲ್ಲಿ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಆನ್‌ಲೈನ್ ನೋಂದಣಿಗೆ ಅವಕಾಶ ಮಾಡಿಕೊಡ ಲಾಗಿದೆ. ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳು ವಂತೆ ಸೂಚಿಸಿರುವ ಅವರು, ಕ್ರೀಡಾಕೂಟ ದಲ್ಲಿ ಭಾಗ ವಹಿಸುವ ನೌಕರರಿಗೆ 2 ದಿನಗಳ ಓಓಡಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದ ವರು ತಿಳಿಸಿದರು.
ಕ್ರೀಡಾಕೂಟದ ಮೊದಲ ದಿನದಂದು ಸಂಜೆ ನಗರದ ನೆಹರೂ ಕ್ರೀಡಾಂಗಣದ ಭವ್ಯ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಜೀ-ಕನ್ನಡ ವಾಹಿನಿಯ ಪ್ರಸಿದ್ಧ ಕಾರ್ಯ ಕ್ರಮ ಸರಿಗಮಪ ಖ್ಯಾತಿಯ ಹಾಡು ಗಾರರಿಂದ ಸಂಗೀತ ಸಂಜೆ ಕಾರ್ಯ ಕ್ರಮವನ್ನು ಏರ್ಪಡಿಲಾಗಿದೆ ಎಂದರು.
ಈ ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃಧ್ದಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಉದ್ಘಾಟಿಸುವರು. ಸಂಸದ ಬಿ.ವೈ.ರಾಘವೇಂದ್ರ ಅವರು ಕ್ರೀಡಾ ಜ್ಯೋತಿ ಸ್ವೀಕರಿಸುವರು. ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಚುನಾ ಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಲಿರುವರು ಎಂದರು.
ಸಂಘದ ಗೌರವಾಧ್ಯಕ್ಷ ರಮೇಶ್, ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್ ಕುಮಾರ್, ಕಾರ್ಯದರ್ಶಿ ಐ.ಪಿ. ಶಾಂತ ರಾಜ್, ಉಪಾಧ್ಯಕ್ಷ ಪಾಪಣ್ಣ, ಆರ್. ಮಾರುತಿ, ದಿನೇಶ್, ಸತೀಶ್, ಸಿಂಗ್ ಮುಂತಾದವರು ಉಪಸ್ಥಿತರಿದ್ದರು.
previous post
next post