ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ 112 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ-ಶಿಕಾರಿಪು-ರಾಣೆಬೆನ್ನೂರು ಮಾರ್ಗಕ್ಕೆ ಈ ಬಾರಿ 100 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಕೇಂದ್ರ ರೈಲ್ವೆ ಸಚಿವರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಈ ನೆರವು ನೀಡಲಾಗಿದೆ. ಅದೇ ರೀತಿ ಶಿವಮೊಗ್ಗ ಸಮೀಪದ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಸೆಂಟರ್‌ನ ಕಾಮಗಾರಿಗೆ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಸಾಲಿನ ಬಜೆಟ್‌ನಲ್ಲಿ ಈ ಯೋಜನೆಗೆ ಅನುದಾನ ನೀಡಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ಈ ಯೋಜನೆಗೆ 12 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿರುವ ಸಂಸದರು ರೈಲ್ವೆ ಸಚಿವರು ಹಾಗೂ ಹಣಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
previous post
next post